ಚಾಮರಾಜನಗರ: ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಗಳ ನಗರಸಭೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಕಸ ಸಂಗ್ರಹ, ವಿಲೇವಾರಿ ಸೇರಿದಂತೆ ಸ್ವಚ್ಛತಾ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ನಗರಸಭೆಯಲ್ಲಿ ಸರ್ಕಾರದ ಸೇವೆಗಳನ್ನು ಪಡೆಯಲಾಗದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅರ್ಜಿ ಕೊಟ್ಟು ಹಲವು ತಿಂಗಳುಗಳಾದರೂ ವಿಲೇವಾರಿ ಮಾಡುತ್ತಿಲ್ಲ. ಸಾರ್ವಜನಿಕರು ಆಸ್ತಿ ಕಂದಾಯ ಪಾವತಿ ಮಾಡಿದರೂ ಕಚೇರಿಯ ಕಡತಗಳಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ. ತಾಂತ್ರಿಕ ವಿಭಾಗಗಳಲ್ಲೂ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.

ಸಾರ್ವಜನಿಕರು ಆಸ್ತಿಗಳ ಖಾತೆ ಬದಲಾವಣೆಗೆ, ಇ-ಸ್ವತ್ತು ಪಡೆಯಲು ಪ್ರತಿದಿನ ಕಚೇರಿಗೆ ಅಲೆದು ಸಾಕಾಗಿದ್ದಾರೆ. ಅಧಿಕಾರಿಗಳು ಸಾರ್ವಜನಿಕರಿಗೆ ಕನಿಷ್ಟ ಗೌರವ ಕೊಡದೆ ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಿಬೇಕು ಎಂದು ಕನ್ನಡಪರ ಹೋರಾಟಗಾರ ಚಾರಂ ಶ್ರೀನಿವಾಸಗೌಡ ಒತ್ತಾಯಿಸಿದರು.

ಸರ್ಕಾರ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಅನುದಾನ ನೀಡಿದ್ದರೂ ಅಧಿಕಾರಿಗಳು ಬಿಡುಗಡೆ ಮಾಡುತ್ತಿಲ್ಲ. ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ನಗರಸಭೆ ಕಾರ್ಯ ನಿರ್ವಹಿಸುತ್ತಿದ್ದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ. ತಿಂಗಳೊಳಗೆ ಸಮಸ್ಯೆಗಳು ಬಗೆಹರಿಯದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ, ಸಾರ್ವಜನಿಕರು ಹಾಗೂ ಸಂಘ–ಸಂಸ್ಥೆಗಳ ಸಹಕಾರದೊಂದಿಗೆ ಚಾಮರಾಜನಗರ ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

31 ವಾರ್ಡ್ಗಳಲ್ಲೂ ಚರಂಡಿಗಳು ಮತ್ತು ರಸ್ತೆಗಳು ಸ್ವಚ್ಛತೆ ಇಲ್ಲವಾಗಿದೆ. ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು 10 ರಿಂದ 15 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಾ.ಮುರಳಿ, ಸುರೇಶ್ ವಾಜಪೇಯಿ, ಮಾರ್ಕೆಟ್ ಗಿರೀಶ್, ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ನಿಜದ್ವನಿ ಗೋವಿಂದರಾಜು, ಕಂಡಕ್ಟರ್ ಸೋಮನಾಯಕ, ಗಿರೀಶ್, ರಾಜುನಾಯಕ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಸುರೇಶ್ ಗೌಡ, ಆಟೋ ಲಿಂಗರಾಜು, ಬಸವರಾಜು, ರಾಚಪ್ಪ, ಅಮಚವಾಡಿ ರಾಜು, ಶಿವಣ್ಣ, ಮುತ್ತಿಗೆ ಗೋವಿಂದರಾಜು, ನಾಗೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-37-1270039890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.