ಚಾಮರಾಜನಗರ: ಕೇಂದ್ರ ಸರ್ಕಾರದ ಬದಲಾಗಿ ಆಯಾ ರಾಜ್ಯ ಸರ್ಕಾರಗಳಿಗೆ ನೀಟ್ ಪರೀಕ್ಷೆ ನಡೆಸಲು ಅನುಮತಿ ನೀಡಬೇಕು ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿ ಶ್ರೀರೂಪಾ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ವೈದ್ಯಕೀಯ ಶಿಕ್ಷಣ ಪ್ರವೇಶಾತಿ ಪಡೆಯಲು ದೇಶದಾದ್ಯಂತ ನಡೆಸುವ ನೀಟ್ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ನೀಟ್ಗಾಗಿ ಶ್ರಮವಹಿಸಿದ್ದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ, ಹಣದಾಸೆಗೆ ಪ್ರಶ್ನೆ ಪತ್ರಿಕೆ ಬಹಿರಂಗಗೊಳಿಸಿ ಬಡಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟ ವಾಡಿರುವುದು ಖಂಡನೀಯ.

ಕೇಂದ್ರ ಸರ್ಕಾರ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳಬೇಕು. ಮುಂದೆ ಇಂತಹ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಬೇಕು, ಕೇಂದ್ರ ಶಿಕ್ಷಣ ಸಚಿವ ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಮುಂದೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಆಯೋಜಿಸುವ ಬದಲು ಆಯಾಯ ರಾಜ್ಯ ಸರ್ಕಾರಗಳಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.

ಪಣ್ಯದಹುಂಡಿ ರಾಜು, ಹೊಮ್ಮ ಲೋಕೇಶ್, ಅರುಣ್ ಕುಮಾರ್ ಗೌಡ, ರವಿಚಂದ್ರ ಪ್ರಸಾದ್ ಕಹಳೆ, ರಾಜಪ್ಪ, ಶಿವು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-37-1641163714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.