ಚಾಮರಾಜನಗರ: ಐದು ವರ್ಷಗಳ ಹಿಂದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಸರ್ಕಾರಿ ಉದ್ಯೋಗಗಳನ್ನು ನೀಡಿರುವುದು ಸಮಾಧಾನ ತಂದರೂ ದುರಂತಕ್ಕೆ ಕಾರಣರಾದ ಅಧಿಕಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಎಸ್ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದರು.

ಭಾನುವಾರ ಹಮ್ಮಿಕೊಂಡಿದ್ದ ಆಕ್ಸಿಜನ್ ದುರ್ಘಟನೆಯ ಸಂತ್ರಸ್ತರೊಂದಿಗೆ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರಿಸಿ ಕೊಂಡಿರುವ ರಾಜ್ಯ ಸರ್ಕಾರ ಆಕ್ಸಿಜನ್ ದುರಂತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ನಿಟ್ಟಿನಲ್ಲಿ ಎಸ್ಡಿಪಿಐ ಹೋರಾಟ ಮುಂದುವರಿಯಲಿದೆ ಎಂದರು.

ಆಕ್ಸಿಜನ್ ದುರಂತ ಅಂದಿನ ಬಿಜೆಪಿ ಸರ್ಕಾರದ ಬಹುದೊಡ್ಡ ಪ್ರಮಾದ ಹಾಗೂ ಸರ್ಕಾರದ ಪ್ರಯೋಜಕತ್ವದಲ್ಲಿ ನಡೆದ ಕೊಲೆ ಎಂದರೂ ತಪ್ಪಾಗಲಾರದು. ಅಂದು ಮೃತರ ಕುಟುಂಬಗಳ ನೆರವಿಗೆ ಧಾವಿಸುವ ಬದಲು ದುರಂತದಲ್ಲಿ 37 ಮಂದಿ ಜೀವ ಬಿಟ್ಟರೂ ಕೇವಲ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಸರ್ಕಾರ ಬಹಿರಂಗ ಹೇಳಿಕೆ ನೀಡುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಿತು.

ನ್ಯಾಯಮೂರ್ತಿ ವೇಣುಗೋಪಾಲ್ ವರದಿಯಲ್ಲಿ 37 ಮಂದಿ ಮೃತಪಟ್ಟಿರುವುದನ್ನು ಆಧಾರವಾಗಿಟ್ಟುಕೊಂಡು ಎಸ್ಡಿಪಿಐ ಸಹಿತ ಸಂಘ ಸಂಸ್ಥೆಗಳು, ಪ್ರಗತಿಪರ, ರೈತ, ದಲಿತ ಸಂಘಟನೆಗಳು ನಿರಂತರ ಹೋರಾಟ ರೂಪಿಸಿದ ಫಲವಾಗಿ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರೆಯಿತು ಎಂದರು.

ಸರ್ಕಾರಿ ಉದ್ಯೋಗ ಪಡೆಯಲು ಅರ್ಹ ವಿದ್ಯಾರ್ಹತೆ ಹಾಗೂ ದಾಖಲಾತಿಗಳ ಸಲ್ಲಿಕೆ ಮಾಡದ ಕಾರಣಕ್ಕೆ ಸಂತ್ರಸ್ತ ಐದು ಕುಟುಂಬಗಳಿಗೆ ಉದ್ಯೋಗ ನಿರಾಕರಿಸಲಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಐದು ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಸಾಧ್ಯವಾಗದಿದ್ದರೆ ತಲಾ ₹ 1 ಕೋಟಿ ಪರಿಹಾರ ನೀಡಬೇಕು ಎಂದು ಅಬ್ದುಲ್ ಮಜೀದ್ ಒತ್ತಾಯಿಸಿದರು.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ನೀಡಿರುವುದು ಭಿಕ್ಷೆಯಲ್ಲ; ಮಾಡಿದ ತಪ್ಪಿಗೆ ಪ್ರಾಯಶ್ಚಿತವಷ್ಟೆ. ಉದ್ಯೋಗ ವಂಚಿತ ಐದು ಕುಟುಂಬಗಳಿಗೆ ನ್ಯಾಯ ಸಿಗುವವರೆಗೂ ಎಸ್ಡಿಪಿಐ ಹೋರಾಟ ನಿಲ್ಲುವುದಿಲ್ಲ ಎಂದು ಭರವಸೆ ನೀಡಿದರು.

ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ರಾರ್ ಅಹಮದ್ ಮಾತನಾಡಿ, ಆಕ್ಸಿಜನ್ ದುರಂತ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವಲ್ಲಿ ನಡೆಸಿದ ಸುಧೀರ್ಘ ಹೋರಾಟ ತಾರ್ಕಿಕ ಅಂತ್ಯ ತಲುಪಿರುವುದು ಸಮಾಧಾನ ತಂದಿದೆ. ಉದ್ಯೋಗ ವಂಚಿತ ಕುಟುಂಬಗಳಿಗೂ ನ್ಯಾಯ ಕೊಡಿಸಲು ಎಸ್ಡಿಪಿಐ ಬದ್ಧವಾಗಿದೆ ಎಂದರು.

ಸಂಘಸೇನಾ, ವೆಂಕಟರಮಣ ಸ್ವಾಮಿ, ಹೆಗ್ಗವಾಡಿ ಮಹೇಶ್ ಕುಮಾರ್, ಎಸ್ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್ ಉಲ್ಲ, ಉಪಾಧ್ಯಕ್ಷ ಸಿ.ಕೆ.ನಯಾಜ್, ಪ್ರಧಾನ ಕಾರ್ಯದರ್ಶಿ ಗಾಳಿಪುರ ಮಹೇಶ್, ಸೈಯದ್ ಆರೀಫ್, ರಾಮಸಮುದ್ರ ಸುರೇಶ್, ಬಂಗಾರಸ್ವಾಮಿ, ಸೈಯದ್ ಇರ್ಫಾನ್, ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-37-618913728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.