ಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ದಟ್ಟವಾದ ಅರಣ್ಯವಿದ್ದು, ಆಗಾಗ ಕಾಡಾನೆಗಳು ರಸ್ತೆಯ ಮಧ್ಯೆ ಅಡ್ಡಲಾಗಿ ನಿಂತು ವಾಹನ ಸವಾರರಿಗೆ ಭೀತಿ ಹುಟ್ಟಿಸುತ್ತಿವೆ.

‘ಮಂಗಳವಾರ ರಾತ್ರಿಯೂ ಪಾಲಾರ್ ರಸ್ತೆಯಲ್ಲಿ ಕಾಡಾನೆಗಳ ಹಿಂಡು ಅಡ್ಡಬಂದಿದ್ದು, ವಾಹನ ಸವಾರರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆನೆಗಳ ಹಿಂದು ಕಂಡು ಬೈಕ್ ಸವಾರರು ಮೊಬೈಲ್ಗಳಲ್ಲಿ ಚಿತ್ರಗಳನ್ನು ಸೆರೆ ಹಿಡಿದರು. ಕಾಡಿನೊಳಗಿಂದ ಮುಖ್ಯರಸ್ತೆಗೆ ಬರುತ್ತಿರುವ ಕಾಡಾನೆಗಳನ್ನು ಅರಣ್ಯದೊಳಗೆ ಓಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

‘ಮಂಗಳವಾರ ಕಾಣಿಸಿಕೊಂಡ ಆನೆಯಗಳ ಹಿಂಡಿನಲ್ಲಿ ಹೆಣ್ಣಾನೆಯ ಕೆಳ ಭಾಗದ ಸೊಂಡಿಲಿನಲ್ಲಿ ಗಾಯ ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು’ ಎಂದು ವಿಡಿಯೊ ಚಿತ್ರೀಕರಿಸಿದ ವ್ಯಕ್ತಿ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-89540573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.