ಚಾಮರಾಜನಗರ: ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಆಸ್ತಿಗಳ ಕಾಗದರಹಿತ ದಸ್ತಾವೇಜು ನೋಂದಣಿ ಪ್ರಕ್ರಿಯೆಗೆ ನೋಂದಣಿ ಮತ್ತು ಮುಂದ್ರಾಂಕ ಇಲಾಖೆಯ ಆಯುಕ್ತ ಮುಲ್ಲೈ ಮುಗಿಲನ್ ಗುರುವಾರ ಇಲ್ಲಿನ ಜಿಲ್ಲಾ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಚಾಲನೆ ನೀಡಿದರು.

‘ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಈ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಸಾಧಕ– ಬಾಧಕಗಳನ್ನು ಅರಿತು ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದು ತಿಳಿಸಿದರು.

‘2023ರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಬಳಕೆಯಲ್ಲಿರುವ ಕಾವೇರಿ 2.0 ತಂತ್ರಾಂಶವನ್ನು ಕಾಗದ ರಹಿತ ನೋಂದಣಿ ವ್ಯವಸ್ಥೆಗೆ ಅನುಗುಣವಾಗಿ ಅಪ್ಡೇಟ್ ಮಾಡಲಾಗಿದೆ. ಸಾರ್ವಜನಿಕರ ಆಸ್ತಿಗಳಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳ ಸೃಷ್ಟಿಗೆ ಹಾಗೂ ನೋಂದಣಿಗೆ ಸಂಪೂರ್ಣ ಕಡಿವಾಣ ಬೀಳಲಿದೆ’ ಎಂದು ಮಾಹಿತಿ ನೀಡಿದರು.

ಇನ್ನು ಮುಂದೆ ಸಾರ್ವಜನಿಕರ ಆಸ್ತಿಗಳ ದಾಖಲೆಗಳು ಭೌತಿಕವಾಗಿರದೆ ಸಂಪೂರ್ಣವಾಗಿ ಡಿಜಿಟಲ್ ರೂಪದಲ್ಲಿರುತ್ತವೆ. ಸಾಲ ಪಡೆಯಲು ಅಥವಾ ವ್ಯವಹಾರಗಳಿಗೆ ಬ್ಯಾಂಕ್ ಅಥವಾ ಇತರ ಸಂಸ್ಥೆಗಳಿಗೆ ಭೌತಿಕ ದಾಖಲೆಸಲ್ಲಿಸುವ ಅಗತ್ಯ ಇರುವುದಿಲ್ಲ. ಸಂಬಂಧಪಟ್ಟ ಸಂಸ್ಥೆಗಳು ನೇರವಾಗಿ ಡಿಜಿಟಲ್ ಲೈಬ್ರರಿಯಿಂದ ದಾಖಲೆ ಪಡೆಯಲು ಅವಕಾಶ ನೀಡಲಾಗುವುದು ಎಂದರು.

‘ಆನ್ಲೈನ್ನಲ್ಲಿ ತ್ವರಿತ ಹಾಗೂ ಸುಲಭವಾಗಿ ದಾಖಲೆಗಳನ್ನು ಪಡೆಯಬಹುದು. ಎಲ್ಲವೂ ಪಾರದರ್ಶಕವಾಗಿರಲಿದೆ’ ಎಂದು ಮುಲ್ಲೈ ಮುಗಿಲನ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-810341687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.