ಚಾಮರಾಜನಗರ: ತಾಲ್ಲೂಕಿನ ಬದನಗುಪ್ಪೆ–ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕುಕ್ಕರ್ ತಯಾರಿಕಾ ಕಂಪೆನಿ ನೌಕರ ಮರಿಯಾಲದ ಹುಂಡಿಯ ಶಿವಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೃತನ ಕುಟುಂಬದವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸದ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶೇಷಾದ್ರಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮೃತರ ಕುಟುಂಬಸ್ಥರು ಡಿವೈಎಸ್ಪಿ ಧರ್ಮೇಂದ್ರ ಅವರ ಮೂಲಕ ಎಸ್ಪಿ ಎಂ.ಮುತ್ತುರಾಜ್ ಅವರಿಗೆ ಸೋಮಾರ ದೂರು ನೀಡಿದರು.

ಎಲ್ಕಿಟೆಚ್ ಪ್ರೈವೆಟ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ಶಿವಸ್ವಾಮಿ ಮೃತಪಟ್ಟಿರುವ ಸಂಬಂಧ ದೂರು ನೀಡಲು ಹೋದಾಗ ಗ್ರಾಮಾಂತರ ಠಾಣೆ ಪೊಲೀಸರು ನಿರಾಕರಿಸಿರುವುದು ಖಂಡನೀಯ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು, ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಶಿವಸ್ವಾಮಿ ಸೋಮವಾರ ಬೆಳಿಗ್ಗೆ 10-30ಕ್ಕೆ ಕೆಲಸಕ್ಕೆ ಹೋಗಿದ್ದು ಅಲ್ಲಿ ಮೃತಪಟ್ಟಿದ್ದು ಸಾವಿನ ಬಗ್ಗೆ ಅನುಮಾನಗಳಿದ್ದು ತನಿಖೆ ನಡೆಸಬೇಕು ಎಂದು ದೂರು ನೀಡಿದರೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಶಿವಸ್ವಾಮಿ ಮೃತಪಟ್ಟು 6 ತಾಸು ಕಳೆದರೂ ದೂರು ದಾಖಲು ಮಾಡಿಕೊಳ್ಳಲಿಲ್ಲ ಎಂದು ಸಹೋದರ ಕುಮಾರ್ ಎಂಬುವರು ದೂರಿನಲ್ಲಿ ಆರೋಪಿಸಿದ್ದಾರೆ.

ಮನವಿ ಸಲ್ಲಿಕೆ ವೇಳೆ ದಲಿತ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ವಾಸು ಹೊಂಡರಬಾಳು, ಕಾಗಲವಾಡಿ ಶಿವಸ್ವಾಮಿ, ಶ್ರೀನಿಧಿ ಕುದರ್, ಹಂಡ್ರಕಳ್ಳಿ ಬಸವರಾಜು, ದಡದಹಳ್ಳಿ ಶಂಕರ್, ಚಿಕ್ಕಹೊಳೆ ಕುಮಾರ್, ಮುರುಗೇಶ್, ಕೆಲ್ಲಂಬಳ್ಳಿ ಶಿವು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-37-232213848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.