ಚಾಮರಾಜನಗರ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಮಹದೇವು ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ ಎ.ಆರ್.ಕೃಷ್ಣಮೂರ್ತಿ 3 ಬಾರಿ ಶಾಸಕರಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಎ.ಆರ್.ಕೆ ಅವರಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಬಿ.ರಾಚಯ್ಯ ಅವರನ್ನು ರಾಜಕೀಯ ಗುರು ಎಂದು ಪರಿಗಣಿಸಿರುವ ಸಿದ್ದರಾಮಯ್ಯ ಎ.ಆರ್.ಕೃಷ್ಣಮೂರ್ತಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

30 ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರು ಸಚಿವರಾಗಿಲ್ಲ, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತಾ ಬಂದಿರುವ ದಲಿತ ಸಮುದಾಯಕ್ಕೆ ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಪ್ರಾತಿನಿಧ್ಯ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ತೋಟೇಶ್ ಮಾತನಾಡಿ, ಎ.ಆರ್.ಕೃಷ್ಣಮೂರ್ತಿ ಕಳೆದ 3 ವರ್ಷಗಳಲ್ಲಿ ₹ 500 ಕೋಟಿಗೂ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಕಾಮಗಾರಿ ಮಾಡಿದ್ದಾರೆ. ಮಂತ್ರಿ ಸ್ಥಾನ ನೀಡಿದರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ವಿ.ಚಂದ್ರು, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ತಾ.ಪಂ.ಮಾಜಿ ಸದಸ್ಯ ಹೊಂಗನೂರು ಮಹದೇವು, ಚಾಮುಲ್ ನಿರ್ದೇಶಕ ರೇವಣ್ಣ, ವಕೀಲ ಮಂಜು, ಹನೂರು ಬ್ಲಾಕ್ ಅಧ್ಯಕ್ಷ ಮುಕುಂದ ವರ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-118557540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.