ಚಾಮರಾಜನಗರ: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆದಗನಾಣೆ ಸೇರಿದಂತೆ ಹಲವು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಸಹಿತ ಮೂಲಸೌಕರ್ಯಕ್ಕೆ ಒತ್ತಾಯಿಸಿ ಆದಿವಾಸಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅಸ್ವಸ್ಥಗೊಂಡ ವೃದ್ಧರೊಬ್ಬರನ್ನು ಭಾನುವಾರ ಡೋಲಿಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ಸಾಗಿಸಲಾಯಿತು.

ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಸಂದರ್ಭ ನಿಶಕ್ತರಾದ 55 ವರ್ಷದ ಗಿರಿ ಪಂದಪ್ಪ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ರಸ್ತೆ ಸಂಪರ್ಕ ಇಲ್ಲದೆ ಆಂಬುಲೆನ್ಸ್ ಸಹಿತ ಯಾವುದೇ ವಾಹನಗಳು ಬರಲು ಸಾಧ್ಯವಾಗದೆ ಧರಣಿ ನಿರತರೇ ಒಂದು ಕಿ.ಮೀ ದೂರದವರೆಗೂ ಡೋಲಿಯಲ್ಲಿ ಕಟ್ಟಿಕೊಂಡು ಸಾಗಿಸಿದರು. ಬಳಿಕ ಅರಣ್ಯ ಇಲಾಖೆಯ ವಾಹನದ ನೆರವು ಪಡೆದು ಮಹದೇಶ್ವರ ಬೆಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಸ್ಪಂದನೆ ಇಲ್ಲ: ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆದಗನಾಣೆಗೆ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಒತ್ತಾಯಿಸಿ ಏ.10ರಿಂದ ಆದಿವಾಸಿಗಳ ಹಿತ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ವರ್ಷದ ಹಿಂದೆ ಅರಣ್ಯ ಇಲಾಖೆ ಮೆದಗನಾಣೆ ಹಾಡಿಯಲ್ಲಿ ವಿದ್ಯುತ್ ಸಂಪರ್ಕ ಕಾಮಗಾರಿ ಪೂರ್ಣಗೊಳಿಸಿದ್ದರೂ ಅರಣ್ಯ ಕಾನೂನುಗಳ ಅಡ್ಡಿ ನೆಪವೊಡ್ಡಿ ಇದುವರೆಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಕಂದಾಯ (ಆರ್ಟಿಸಿ) ಭೂಮಿ ಇದ್ದರೂ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡದಿರುವುದು ಅನ್ಯಾಯ ಎಂದು ಆದಿವಾಸಿಗಳ ಹಿತ ಸಂರಕ್ಷಣಾ ಸಮಿತಿ ಅಧ್ಯಕ್ಷ ನಾಗೇಂದ್ರ ಗಾಣಿಗ ಮಂಗಲ ಆಕ್ರೋಶ ವ್ಯಕ್ತಪಡಿಸಿದರು.

ಹಾಡಿಗಳಿಗೆ ವಿದ್ಯುತ್ ಸಂಪರ್ಕ ನೀಡದ ಪರಿಣಾಮ ರಾತ್ರಿ ಹೊತ್ತು ಕಾಡುಪ್ರಾಣಿ ಹಾಗೂ ವಿಷಜಂತುಗಳ ದಾಳಿಯ ಭೀತಿಯಲ್ಲಿ ಆದಿವಾಸಿಗಳು ಬದುಕಬೇಕಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಸಮರ್ಪಕ ರಸ್ತೆ ಸೌಲಭ್ಯ ಇಲ್ಲದೆ ಆಂಬುಲೆನ್ಸ್ ಸಹಿತ ಸಾರಿಗೆ ವಾಹನಗಳು ಹಾಡಿಯೊಳಗೆ ಬರಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ, ಮರಳುವಾಗ ಆನೆ, ಚಿರತೆ ಸಹಿತ ಕಾಡುಪ್ರಾಣಿಗಳ ದಾಳಿ ಭಯದಲ್ಲಿ ನಡೆಯಬೇಕಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-37-868916129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.