ಕೊಳ್ಳೇಗಾಲ: ಜಿಲ್ಲೆಯಲ್ಲಿ ‘ವಿಜಯ ಕರ್ನಾಟಕ ರಕ್ಷಣಾ ವೇದಿಕೆ’ಯ ಪದಾಧಿಕಾರಿಗಳು ಕನ್ನಡ ನೆಲ, ಜಲ, ಭಾಷೆ ಉಳಿವಿಗಾಗಿ ಶ್ರಮಿಸುವ ಮೂಲಕ ಗಡಿ ಜಿಲ್ಲೆಯಲ್ಲಿ ಬದಲಾವಣೆ ಸಮಾಜವನ್ನು ರೂಪಿಸಬೇಕು ಎಂದು ಬೆಂಗಳೂರು ಸಿಸಿಬಿ ವಿಭಾಗದ ಎಸಿಪಿ ಮಹಾನಂದ ಹೇಳಿದರು.

ನಗರದಲ್ಲಿ ಭಾನುವಾರ ವೇದಿಕೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆಯಲ್ಲಿ ಸೇವೆ ಸಲ್ಲಿಸುವವರು ಯಾವುದೇ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳುವ ಮೂಲಕ ವೇದಿಕೆ ರಾಜ್ಯದಾದ್ಯಂತ ವ್ಯಾಪಿಸಬೇಕು. ಭ್ರಷ್ಟಾಚಾರ, ಅನ್ಯಾಯಗಳ ವಿರುದ್ಧ ಹೋರಾಟಗಳನ್ನು ನಡೆಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಂಘಟನೆ ಮುಂದಾಗಬೇಕು ಎಂದರು.

ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, ಕೊಳ್ಳೇಗಾಲ ಘಟಕದಿಂದ ಪದಾಧಿಕಾರಿಗಳ ಪದಗ್ರಹಣ, ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧಕ ಮಕ್ಕಳಿಗೆ ಪ್ರೋತ್ಸಾಹ ಮೆಚ್ಚುವಂತಹ ವಿಷಯವಾಗಿದೆ. ಅನ್ಯಾಯ ಕಂಡು ಬಂದಲ್ಲಿ ಹೋರಾಟದಿಂದ ನ್ಯಾಯ ಕೊಡಿಸಿದರೆ ಅವರೂ ನಮ್ಮ ಸಂಘಟನೆಯ ಪರವಾಗಿ ನಿಲ್ಲವರು. ಶಾಶ್ವತ ಸದಸ್ಯರಿಗೆ ₹1 ಲಕ್ಷದ ಆರೋಗ್ಯ ವಿಮೆ ಮಾಡಲಾಗಿದೆ. ಜಿಲ್ಲೆಯಲ್ಲಿ 100 ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲು ನಿರ್ಧಾರ ಮಾಡಲಾಗಿದೆ ಎಂದರು. ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು.

ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿದರು.

ಚಾಮುಲ್ ಅಧ್ಯಕ್ಷನಂಜುಂಡಸ್ವಾಮಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಪ್ರಥಮ ದರ್ಜೆ ಗುತ್ತಿಗೆದಾರ ಓಲೆ ಮಹದೇವ, ಬಿಇಒ ಮಂಜುಳಾ, ಉಪನ್ಯಾಸಕ ಗಿರೀಶ್ ಬಾಬು, ವೇದಿಕೆ ರಾಜ್ಯ ಉಪಾಧ್ಯಕ್ಷ ದೇವರಾಜು, ಚಿಕ್ಕಬಳ್ಳಾಪುರ ಅಧ್ಯಕ್ಷ ಅಶೋಕ್, ಜಿಲ್ಲಾ ಗೌರವಧ್ಯಕ್ಷ ವೆಂಕಟಚಾಲ, ಜಿಲ್ಲಾಧ್ಯಕ್ಷರು ಶಿವಸುಂದರ್, ತಾಲ್ಲೂಕು ಅಧ್ಯಕ್ಷ ರೇವಣ್ಣ , ಎಲ್ಲಾ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-37-2114326698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.