ಚಾಮರಾಜನಗರ: ಏ.30 ರಿಂದ ಮೇ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ 4 ಪರೀಕ್ಷಾ ಕೇಂದ್ರಗಳಿದ್ದು 1,541 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ನಡೆಯುವ ದಿನ ಪೊಲೀಸ್ ಇಲಾಖೆ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ ಒದಗಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಶುಶ್ರೂಷಕರನ್ನು ಪ್ರಥಮ ಚಿಕಿತ್ಸಾ ಕಿಟ್ನೊಂದಿಗೆ ನಿಯೋಜಿಸಬೇಕು. ಪರೀಕ್ಷಾ ದಿನ ಹಾಗೂ ಪರೀಕ್ಷೆಗೂ ಮುನ್ನ ದಿನಗಳಲ್ಲಿ ಓದಲು ತೊಂದರೆಯಾಗದಂತೆ ಸೆಸ್ಕ್ ಅಧಿಕಾರಿಗಳು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಸೂಚಿಸಿದರು.

ಪರೀಕ್ಷಾ ದಿನ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದ್ದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕರು, ನಿರ್ವಾಹಕರಿಗೆ ಸೂಚನೆ ನಿಡಬೇಕು.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇದಿತ ಪ್ರದೇಶ ಎಂದು ಘೋಷಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವಂತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ವದಂತಿಗಳಿಗೆ ಕಿವಿ ಕೊಡಬಾರದು. ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪ್ರಾಂಶುಪಾಲರು ಸಿಬ್ಬಂದಿ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ನಿರ್ದೇಶನ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-37-1471287208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.