ಚಾಮರಾಜನಗರ: ಜಿಲ್ಲೆಯಾದ್ಯಂತ ಜೂನ್ 28ರಂದು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಲಸಿಕಾ ಟಾಸ್ಕ್ ಪೋರ್ಸ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ 28ರಂದು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತದೆ.

ಈ ಬಾರಿ ಜಿಲ್ಲೆಯ 58,775 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪೋಲಿಯೋ ಹನಿಯಿಂದ ಯಾವ ಮಗುವೂ ವಂಚಿತವಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು, ಕಾರ್ಯಕ್ರಮದ ಯಶಸ್ಸಿಗೆ ಆರೋಗ್ಯ ಇಲಾಖೆಗೆ ಇತರೆ ಇಲಾಖೆಗಳು ಸಹಕಾರ ನೀಡಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

28ರಂದು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. 29ರಿಂದ 30ರವರೆಗೆ ಗ್ರಾಮೀಣ ಪ್ರದೇಶ ಹಾಗೂ 29ರಿಂದ ಜುಲೈ 1ರವರೆಗೆ ನಗರ ಪ್ರದೇಶದ ಮನೆಮನೆಗಳಿಗೆ ಆರೋಗ್ಯ ಕಾರ್ಯಕರ್ತೆಯರು ಭೇಟಿನೀಡಿ ಪೋಲಿಯೋ ಲಸಿಕೆ ನೀಡಲಿದ್ದಾರೆ.

ನಗರ ಪ್ರದೇಶದಲ್ಲಿ 93 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 519 ಸೇರಿದಂತೆ 612 ಬೂತ್ಗಳನ್ನು ತೆರೆಯಲಾಗುತ್ತದೆ. ಬಸ್, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ 25 ಟ್ರ್ಯಾನ್ಸಿಟ್ ಬೂತ್ಗಳನ್ನು ತೆರಯಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಮಾಹಿತಿ ನೀಡಿದರು.

ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಪ್ರಾರ್ಥನೆಯ ಸಮಯ ಶಿಕ್ಷಕರು ಮಕ್ಕಳಿಗೆ ಪೋಲಿಸಿ ಲಸಿಕೆ ಕುರಿತು ಮಾಹಿತಿ ನೀಡಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಬೇಕು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಗಳನ್ನು ರಚಿಸಬೇಕು. ಅಂಗನವಾಡಿ, ಆಶಾ ಹಾಗೂ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಗುಂಪುಗಳ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಅಚ್ಚುಕಟ್ಟು ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳು, ಇತರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳು, ಕಾಡಂಚಿನ ಗ್ರಾಮಗಳ ಹಾಗೂ ಅರಣ್ಯವಾಸಿಗಳ ಮಕ್ಕಳು ಪೋಲಿಯೋ ಹನಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈಗಿನಿಂದಲೇ ಪೂರ್ವಸಿದ್ದತಾ ಕಾರ್ಯಗಳನ್ನು ಕೈಗೊಳ್ಳಬೇಕು. ಪೋಲಿಯೋ ಹನಿ ಹಾಕುವ ದಿನಗಳಲ್ಲಿ ನಿರಂತರ ವಿದ್ಯುತ್ ಸೌಲಭ್ಯ ಒದಗಿಸಬೇಕು. ಬೂತ್ಗಳಲ್ಲಿ ಲಸಿಕಾ ಕಾರ್ಯ ನಿರ್ವಹಿಸುವ ಕಾರ್ಯಕರ್ತರಿಗೆ ಅವಶ್ಯ ತರಬೇತಿ ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರ ಮಾತನಾಡಿ ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು ರಾಷ್ಟ್ರದ ಯಾವ ಭಾಗದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ಆದರೂ ನೆರೆಯ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ದೇಶಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಇರುವುದರಿಂದ ಮುನ್ನೆಚ್ಚರಿಕೆಯಾಗಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಖೆ ಉಪನಿರ್ದೇಶಕ ಸುರೇಶ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯಿತ್ರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-993135597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.