ಚಾಮರಾಜನಗರ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ನಾಗರಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.

ನಗರದ ಮಹಾಮನೆಯ ಮುಂಭಾಗ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಈಗಾಗಲೇ ವೀರಶೈವ ಲಿಂಗಾಯತ ನೌಕರರ ಸಂಘ ಮಹಾಮನೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಇದರ ಭಾಗವಾಗಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿರುವುದು ಮಾದರಿ ಹಾಗೂ ಶ್ಲಾಘನೀಯ ಎಂದರು.

ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಸೇವನೆ ಅಗತ್ಯವಾಗಿದ್ದು, ನೀರಿನ ಘಟಕದಿಂದ ಸುತ್ತಮುತ್ತಲಿನ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಸಂಘ ಮತ್ತಷ್ಟು ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.

ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ ಮಾತನಾಡಿ, ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಿ ಉಳಿಕೆ ಹಣದಲ್ಲಿ ಮಹಾಮನೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದರು.

ರಾಮಸಮುದ್ರ ಕಂಬಳೀಶ್ವರ ಮಠದ ಮಹಾದೇವ ಸ್ವಾಮೀಜಿ, ಜಂಟಿ ಕ್ರಿಯಾಸಮಿತಿ ಅಧ್ಯಕ್ಷ ಪಿ.ಬಸಪ್ಪ, ಕಾರ್ಯಕಾರಿ ಮಂಡಳಿ ಸದಸ್ಯರು, ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು, ಕದಳಿ ಮಹಿಳಾ ವೇದಿಕೆ ಸದಸ್ಯೆಯರು, ವಿವಿಧ ಸಂಘಗಳ ಸಂಸ್ಥೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-37-911371580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.