ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಕೇಂದ್ರಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರಾಗಿ ಮಾರಾಟಕ್ಕೆ ನೋಂದಣಿ ಮಾಡಿಸಿಕೊಂಡಿರುವ ರೈತರು ಮೇ 5ರೊಳಗೆ ರಾಗಿ ಮಾರಾಟ ಮಾಡುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ಸೂಚಿಸಿದ್ದಾರೆ.

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ರೈತರು ಬೆಳೆದಿರುವ ರಾಗಿ ಖರೀದಿಸಲು ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ ಎದು ಅವರು ಮಾಹಿತಿ ನೀಡಿದ್ದಾರೆ.

ಇದುವರೆಗೂ ಚಾಮರಾಜನಗರ ತಾಲ್ಲೂಕಿನಲ್ಲಿ 4 ಮಂದಿ ರೈತರು ನೋಂದಣಿ ಮಾಡಿಸಿ ಕೊಂಡಿದ್ದು ಮೂವರು ರೈತರಿಂದ 60.50 ಕ್ವಿಂಟಲ್ ರಾಗಿ ಖರೀದಿಸಲಾಗಿದೆ. ಯಳಂದೂರು, ಸಂತೇಮರಹಳ್ಳಿಯಲ್ಲಿ 26 ರೈತರು ನೋಂದಣಿ ಮಾಡಿಸಿಕೊಂಡಿದ್ದು 23 ರೈತರಿಂದ 234.50 ಕ್ವಿಂಟಲ್ ರಾಗಿ ಖರೀದಿಸಲಾಗಿದೆ.

ಕೊಳ್ಳೇಗಾಲ ತಾಲ್ಲೂಕಿನಲ್ಲಿ 44 ರೈತರು ನೋಂದಣಿ ಮಾಡಿಸಿದ್ದು, 40 ರೈತರಿಂದ 595 ಕ್ವಿಂಟಾಲ್ ರಾಗಿ ಖರೀದಿಸಲಾಗಿದೆ. ಹನೂರು ತಾಲ್ಲೂಕಿನಲ್ಲಿ 150 ರೈತರು ನೋಂದಣಿ ಮಾಡಿಸಿದ್ದು 144 ರೈತರಿಂದ 3,375.50 ಕ್ವಿಂಟಲ್ ರಾಗಿ ಖರೀದಿಸಲಾಗಿದೆ. ಇದುವರೆಗೂ 224 ರೈತರು ರಾಗಿ ಖರೀದಿಗೆ ನೋಂದಣಿ ಮಾಡಿಸಿದ್ದು 210 ರೈತರಿಂದ 4,265 ಕ್ವಿಂಟಲ್ ಖರೀದಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಖರೀದಿಸಿದ ರಾಗಿಯನ್ನು ಮೇ ತಿಂಗಳಿನಿಂದ ಪಡಿತರ ಮೂಲಕ ವಿತರಣೆ ಮಾಡಬೇಕಾಗಿದ್ದು ಖರೀದಿ ಪ್ರಕ್ರಿಯೆಯನ್ನು ಮೇ 5ಕ್ಕೆ ಮುಕ್ತಾಯಗೊಳಿಸಲಾಗುವುದು.

ಹಾಗಾಗಿ ರಾಗಿ ನೀಡಲು ಬಾಕಿಯಿರುವ ನೋಂದಾಯಿತ ರೈತರು 5ರೊಳಗೆ ಖರೀದಿ ಕೇಂದ್ರಗಳಿಗೆ ನೀಡಬೇಕು. ನಂತರ ರಾಗಿ ಖರೀದಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-37-1901555168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.