ಚಾಮರಾಜನಗರ: ‘ಈಚೆಗೆ ಸುರಿದ ಆಲಿಕಲ್ಲು ಮಳೆಗೆ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದ್ದು ಸರ್ಕಾರ ರೈತರಿಗೆ ವೈಜ್ಞಾನಿಕ ನಷ್ಟ ಪರಿಹಾರ ನೀಡಬೇಕು’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾದ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.

ಸೋಮವಾರ ನಗರದ ಚಾಮರಾಜೇಶ್ವರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾತನಾಡಿದ ಅವರು, ಈಚೆಗೆ ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಸುರಿದ ಆಲಿಕಲ್ಲು ಮಳೆಗೆ ಬಾಳೆ, ಈರುಳ್ಳಿ, ಕಲ್ಲಂಗಡಿ, ಪಪ್ಪಾಯ, ಮೆಣಸಿನಕಾಯಿ, ಸೌತೆಕಾಯಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ದ್ರಾಕ್ಷಿ ಬೆಳೆಗೆ ಅಪಾರ ಹಾನಿ ಸಂಭವಿಸಿದೆ ಎಂದು ತಿಳಿಸಿದರು.

‘ಆಕಾಲಿಕ ಮಳೆಗೆ ತುತ್ತಾದ ಬೆಳೆಗಳಿಗೆ ಸರ್ಕಾರ ವೈಜ್ಞಾನಿಕವಾಗಿ ಬೆಳೆ ನಷ್ಟ ಪರಿಹಾರ ಘೋಷಣೆ ಮಾಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗಿದ್ದು ತೋಟಗಾರಿಕೆ, ಕೃಷಿ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಮರ್ಪಕ ವರದಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ರೈತರು ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ಆಲಿಕಲ್ಲು ಮಳೆಯಿಂದ ನಾಶವಾಗಿದೆ, ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರ ಹೆಗಲಿಗೆ ಸಾಲದ ಹೊರೆ ಬಿದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾನದಂಡದ ಪ್ರಕಾರ ಒಂದು ಹೆಕ್ಟೇರ್ ಬೆಳೆ ನಾಶಕ್ಕೆ ಕೇವಲ ₹17,000 ನಷ್ಟ ಪರಿಹಾರ ಸಿಗಲಿದೆ. ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಬೆಳೆ ಪರಿಹಾರವನ್ನು ಪರಿಷ್ಕರಿಸಿ ವೈಜ್ಞಾನಿಕ ದರ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.

‘ಕಾಲಕಾಲಕ್ಕೆ ಶಾಸಕರು, ಸಚಿವರು, ಸಂಸದರು, ಮುಖ್ಯಮಂತ್ರಿ ಹಾಗೂ ರಾಜ್ಯ ಕೇಂದ್ರ ಸರ್ಕಾರದ ಅಧಿಕಾರಿಗಳ ವೇತನ, ಪಿಂಚಣಿ ಪರಿಷ್ಕರಣೆ ಮಾಡಲಾಗುತ್ತದೆ. ಆದರೆ, ರೈತರಿಗೆ ಬಿಡಿಗಾಲು ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿರುವುದು ದುರದೃಷ್ಟಕರ’ ಎಂದು ಟೀಕಿಸಿದರು.

‘ಜಿಲ್ಲೆಯಲ್ಲಿ ಅಪಾರ ಬೆಳೆ ನಷ್ಟವಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ, ತೋಟಗಾರಿಕೆ ಸಚಿವರು ಪರಿಶೀಲನೆ ನಡೆಸದೆ ಉಪ ಚುನಾವಣೆಯ ಗುಂಗಿನಲ್ಲಿ ನಿರತರಾಗಿರುವುದು ಖಂಡನೀಯ. ಜಿಲ್ಲಾಡಳಿತ, ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಸರಿಯಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದರು.

‘ಬೆಳೆ ನಷ್ಟ ಹೊಂದಿರುವ ರೈತರ ಕೃಷಿ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಮೂಲಕ ನಷ್ಟ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಅಡ್ಡುವಿನಹಳ್ಳಿ ಎಚ್.ಎಸ್.ರಾಜು, ಒಳಗೆರೆ ಗಣೇಶ್, ಮಲಿಯೂರು ಮಹೇಂದ್ರ, ಸತೀಶ್ ನರಸಮಂಗಲ, ನಾಗು, ಪ್ರಕಾಶ್, ಗಾಂಧಿ, ಚಿದಂಬರ್, ಊರದಹಳ್ಳಿ ರಾಮಣ್ಣ, ಸ್ಯಾಂಡ್ರಹಳ್ಳಿ ಬಸವರಾಜು, ನಾಗರಾಜಪ್ಪ, ಮುಕಡಹಳ್ಳಿ ರಾಜು, ಪುಟ್ಟಮಲ್ಲೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-37-1858956286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.