ಚಾಮರಾಜನಗರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನದ ಸ್ಮರಣೆಗೆ ಕೆಪಿಸಿಸಿ ಕಾರ್ಮಿಕ ಘಟಕ ಹಮ್ಮಿಕೊಂಡಿರುವ`ರಾಜೀವ್ ಜ್ಯೋತಿ ಯಾತ್ರೆ ನಗರಕ್ಕೆ ಆಗಮಿಸಿದ್ದು ಭಾನುವಾರ ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ತಮಿಳುನಾಡಿನ ಕಡೆಗೆ ಹೊರಟ ಯಾತ್ರೆಗೆ ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಬೀಳ್ಕೊಟ್ಟರು.

ಬಳಿಕ ಮಾತನಾಡಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ, ದೂರಸಂಪರ್ಕ ವಲಯದ ಬೆಳವಣಿಗೆ, ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ, ಸ್ಥಳೀಯ ಆಡಳಿತದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವಂತಹ ಕ್ರಾಂತಿಕಾಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ರಾಜೀವ್ ಗಾಂಧಿ ಆಧುನಿಕ ಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.

ಕೋಮುವಾದ, ಭಯೋತ್ಪಾದನೆ ತೊಲಗಿಸುವುದು, ರಾಜೀವ್ ಗಾಂಧಿ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವುದು. ನಕ್ಸಲ್ವಾದ ತಡೆಗೆ ಪೊಲೀಸ್ ಪಡೆಗಳ ಜೊತೆ ಕೈಜೋಡಿಸುವುದು ಯಾತ್ರೆಯ ಉದ್ದೇಶ ಎಂದರು.

ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಆರ್.ದೊರೈವೇಲು ಮಾತನಾಡಿ, 35 ವರ್ಷಗಳಿಂದ ರಾಜೀವ್ ಜ್ಯೋತಿ ಯಾತ್ರೆ ನಡೆಯುತ್ತಿದ್ದು ಬೆಂಗಳೂರಿನಿಂದ ನೆಲಮಂಗಲ, ಕುಣಿಗಲ್, ಯಡಿಯೂರು, ಚನ್ನರಾಯಪಟ್ಟಣ, ಹಾಸನ, ಹೊಳೆ ನರಸೀಪುರ, ಕೆ.ಆರ್.ನಗರ ಮತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಮೂಲಕ ತಮಿಳುನಾಡಿನ ಸತ್ಯಮಂಗಲ, ಕೊಯಮತ್ತೂರು, ಪೆರುಮ ನಲ್ಲೂರು, ಈರೋಡ್, ಸೇಲಂ, ಅತ್ತೂರು, ಧರ್ಮಪುರಿ, ಕೃಷ್ಣಗಿರಿ ಮಾರ್ಗವಾಗಿ ಪಾಂಡಿಚೇರಿ ತಲುಪಲಿದೆ. ರಾಜೀವ್ ಜ್ಯೋತಿ ಯಾತ್ರೆ ಮೇ 21ರಂದು ಪೆರಂಬದೂರಿನಲ್ಲಿ ಸಮಾಪ್ತಿಯಾಗಲಿದೆಎಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗರತ್ನ, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಪದ್ಮಾ ಪುರುಷೋತ್ತಮ, ಕಾಗಲವಾಡಿಚಂದ್ರು, ನಾಗಯ್ಯ, ರೂಪೇಶ್, ಎ.ಎಚ್. ನಸ್ರುಲ್ಲಾ ಖಾನ್, ನಾಗರಾಜು, ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-37-889419406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.