ಚಾಮರಾಜನಗರ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಬಳಿ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಮಾತನಾಡಿ, ‘2023-24, 2024-25ರಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಶೇ 56ರಷ್ಟು ಮೀಸಲಾತಿ ಅಡಿಯಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಪ್ರವೇಶಾತಿ ಪಡೆದಿದ್ದು, ಉದ್ಯೋಗದಲ್ಲೂ ಬಡ್ತಿ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯ ಶೇ 50 ಮೀಸಲಾತಿ ಮೀರುವಂತಿಲ್ಲ ಎಂದು ಆದೇಶ ನೀಡಿದ ಬಳಿಕ ಮೀಸಲಾತಿ ಲಾಭ ಪಡೆದವರಿಗೆ ಅನ್ಯಾಯವಾಗಿದೆ. ಸಂವಿಧಾನದ 9ನೇ ವಿಧಿಯಲ್ಲಿ ಶೇ 56ರ ಮೀಸಲಾತಿ ವಿಚಾರವನ್ನು ಸೇರಿಸಿದ್ದರೆ ಅನ್ಯಾಯವಾಗುತ್ತಿರಲಿಲ್ಲ’ ಎಂದರು.

‘ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಕಾನೂನುಬದ್ಧಗೊಳಿಸಲು 2023ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ ಸ್ಪಂದನೆ ಸಿಗಲಿಲ್ಲ. ಇದರಿಂದ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಗಳಿಗೆ ಅನ್ಯಾಯವಾಗುತ್ತಿದ್ದು, ರಾಜ್ಯದ ಸಂಸದರು ಹಾಗೂ ಶಾಸಕರು ಗಂಭೀರವಾಗಿ ಚಿಂತಿಸಬೇಕು’ ಎಂದರು.

‘ಶೇ 56ರಷ್ಟು ಮೀಸಲಾತಿ ದೊರೆತರೆ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ತಮಿಳುನಾಡಿನಲ್ಲಿ ಶೇ 63ರಷ್ಟು ಮೀಸಲಾತಿ ಇದ್ದು, ರಾಜ್ಯದಲ್ಲೂ ಅನುಷ್ಠಾನವಾಗಬೇಕು. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕೇಂದ್ರಸರ್ಕಾರದ ಮೇಲೆ ಒತ್ತಡ ಹಾಕಿದರೆ ಒಪ್ಪಿಗೆ ಸಿಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ಕೊಂಡೊಯ್ಯಬೇಕು’ ಎಂದು ಆಗ್ರಹಿಸಿದರು.

ಈಗಾಗಲೇ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದ್ದು, ನ್ಯಾಯಾಲಯದ ತಡೆಯಾಜ್ಞೆ ತೆರವಿಗೆ ಒತ್ತಾಯಿಸಲಾಗಿದೆ. ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಮೀಸಲಾತಿಯ ಲಾಭ ಪಡೆದವರನ್ನೂ ಪತ್ತೆ ಹಚ್ಚಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಶ್ರೀರೂಪಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಾಯಕ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ಸುರೇಶ್ ನಾಯಕ, ಚಾ.ಸಿ.ಸೋಮನಾಯಕ, ರೇವತಿ ನಾಯಕ್, ರಾಜಪ್ಪ, ಜಯಶ್ರೀ, ಹನುಮಂತರಾಯಪ್ಪ, ಸೈಯದ್ ಎಂ.ಡಿ ಮುಜಾಯಿದ್ ಪಾಷ, ರಾಜಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-536503328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.