ಚಾಮರಾಜನಗರ: ‘ಮೂರು ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಹೋರಾಟದ ಫಲವಾಗಿ ಜಾರಿಯಾಗಿರುವ ಒಳ ಮೀಸಲಾತಿಯ ಫಲ ಫಲಾನುಭವಿಗಳಿಗೆ ದಕ್ಕದಂತೆ ಮಾಡುತ್ತಿರುವ ಪ್ರಯತ್ನ ಸಂವಿಧಾನದ ಆಶಯಗಳಿಗೆ ಹಾಗೂ ಸಮಾಜಿಕ ನ್ಯಾಯಕ್ಕೆ ಎಸಗಿದ ದ್ರೋಹ’ ಎಂದು ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಬಸವನಪುರ ರಾಜಶೇಖರ್ ವಾಗ್ದಾಳಿ ನಡೆಸಿದರು.

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟ ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಎಡಗೈ ಸಮುದಾಯಗಳು 36 ವರ್ಷಗಳಿಂದ ನಿರಂತರ ಹೋರಾಟ ಮಾಡಿದ ಫಲವಾಗಿ ಒಳ ಮೀಸಲಾತಿ ಜಾರಿಯಾಗಿತ್ತು. ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅನುಮೋದನೆಯೂ ದೊರೆಕಿದೆ ಎಂದರು.

ಆದರೂ ರಾಜ್ಯ ಸರ್ಕಾರ 56,462 ಹುದ್ದೆಗಳನ್ನು ಭರ್ತಿಗೆ ಹಳೆಯ ಮೀಸಲಾತಿಯಡಿ ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಹೋರಾಟಕ್ಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಕ್ಕೆ ಬಂದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಭರವಸೆ ನೀಡಿ,ಪ್ರಣಾಳಿಕೆಯಲ್ಲೂ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು 2 ವರ್ಷದವರೆಗೂ ಒಳ ಮೀಸಲಾರಿ ಜಾರಿಗೆ ಪ್ರಯತ್ನ ಮಾಡಲಿಲ್ಲ. ಸುಪ್ರೀಂಕೋರ್ಟ್ ನೀಡಿದ ತೀರ್ಪು ಹಾಗೂ ಸಮುದಾಯಗಳ ಹೋರಾಟಕ್ಕೆ ಮಣಿದು ಅನಿವಾರ್ಯವಾಗಿ ಒಳ ಮೀಸಲಾತಿ ಜಾರಿಗೆ ಮುಂದಾಯಿತು ಎಂದು ದೂರಿದರು.

‘ಕಳೆದ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಶಾಸನ ಬದ್ದವಾಗಿ ಕಾಯ್ದೆ ರಚಿಸಿ ರಾಜ್ಯಪಾಲರಿಂದ ಅಂಗೀಕಾರ ಪಡೆದರೂ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅನ್ವಯ ಮಾಡದಿರುವುದು ನೋವಿನ ಸಂಗತಿ. ಹಲವು ರಾಜ್ಯಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಡಗಳ ಜನಸಂಖ್ಯೆಗೆ ಅನುಗುಣವಾಗಿ, ಸಂವಿಧಾನಬದ್ಧವಾಗಿ ಒಳ ಮೀಸಲಾತಿ ಪ್ರಮಾಣ ಹೆಚ್ಚಿಸಿ ಅನುಷ್ಠಾನಗೊಳಿಸಲಾಗಿದೆ.ಇಲ್ಲಿ ರಾಜ್ಯ ಸರ್ಕಾರ ನುಡಿದಂತೆ ಒಳ ಮೀಸಲಾರಿ ಜಾರಿಗೊಳಿಸಬೇಕು, ಇಲ್ಲವಾದರೆ ಎಡಗೈ ಸಮುದಾಯಗಳು ಹಾಗೂ ಸಂಘಟನೆಗಳು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಒಕ್ಕೂಟದ ಅಧ್ಯಕ್ಷ ಎಚ್.ಎಚ್.ನಾಗರಾಜು ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ಸರ್ಕಾರ ಯಥಾವತ್ ಜಾರಿ ಮಾಡಬೇಕು. ಒಳಮೀಸಲಾತಿ ಅನ್ವಯ ಮಾಡದೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬಾರದು ಎಂದು ಒತ್ತಾಯಿಸಿದರು.

ಮುಖಂಡರಾದ ಅರಕಲವಾಡಿ ಜವರಯ್ಯ, ಅರಕಲವಾಡಿ ನಾಗೇಂದ್ರ, ಚಾ.ಗು.ನಾಗರಾಜ್, ವಕೀಲ ಬೂದಿತಿಟ್ಟು ರಾಜೇಂದ್ರ, ಬ್ಯಾಂಕ್ ಬಸವರಾಜು, ಎಲ್ಐಸಿ ರಾಜಣ್ಣ, ಹಸಗೂಲಿ ಸಿದ್ದಯ್ಯ, ಮೂಡಹಳ್ಳಿ ಮೂರ್ತಿ, ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್, ಕೆಸ್ತೂರು ಮರಪ್ಪ , ಸಿ.ಎಚ್.ರಂಗಸ್ವಾಮಿ, ಮೂಡಹಳ್ಳಿ ರಾಚಪ್ಪ, ರಾಮಸಮುದ್ರ ಶಿವಣ್ಣ, ದ್ವಾರ್ಕಿ ಬಸವರಾಜು, ಶಿವಮಲ್ಲು, ಗೋಪಿ, ಸುನೀಲ್, ವಸಂತ್, ಹನುಮಂತು, ಚಂದ್ರು, ಹನೂರು ಗುರುಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-37-1320680649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.