ಚಾಮರಾಜನಗರ: ‘ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಬೇಕು. ಅಪಘಾತಗಳಿಗೆ ಅವಕಾಶವಾಗದಂತೆ ಸಮರ್ಪಕವಾಗಿ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುಬೇಕು’ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಾಮಗಾರಿಗಳು ಕಳಪೆ ಎಂಬ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಮಗಾರಿಗಳು ನಿರ್ವಹಣೆ ಆಗಬೇಕು. ರಸ್ತೆ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕು. ಈ ಹಿಂದಿನ ಸಭೆಯಲ್ಲೂ ಹೆದ್ದಾರಿ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡು ವಿದ್ಯುತ್ ದೀಪ ಅಳವಡಿಕೆ, ಗುಂಡಿ ಮುಚ್ಚುವುದು, ಎಲ್ಲಿ ಅಪಘಾತಕ್ಕೆ ಸಂಭವಿಸುತ್ತಿದ್ದೆಯೋ ಅಂತಹ ಸ್ಥಳಗಳಲ್ಲಿ ತುರ್ತಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕೆಲಸ ಕೈಗೊಳ್ಳಲು ಸೂಚಿಸಲಾಗಿತ್ತು. ನಾನೂ ಸಹ ಖುದ್ದಾಗಿ ಹಲವೆಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆದರೆ ಇನ್ನೂ ಸಹ ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾಮಗಾರಿ ನಿರ್ವಹಿಸಿಲ್ಲ. ಇನ್ನು ಮುಂದೆ ಇಂತಹ ಧೋರಣೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿವೆ. ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸೈನ್ ಬೋರ್ಡ್ ಮತ್ತು ಮಿರರ್ನಂತಹ ಸುಗಮ ಸಂಚಾರಕ್ಕೆ ಮಾರ್ಗದರ್ಶನ ಮಾಡುವ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.

ನಂತರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ನಗರ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿವೆ. ಹೀಗಾಗಿ ಬೈಪಾಸ್ಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಾಗಿದೆ. ಆದರೂ ಸಹ ಇನ್ನೂ ಕ್ರಮ ಕೈಗೊಂಡಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ತುರ್ತಾಗಿ ಕಾಮಗಾರಿ ಕೈಗೊಂಡು ಇನ್ನೂ ಸಂಭವಿಸಬಹುದಾದ ಅಪಘಾತ ತಡೆಯಬೇಕು ಎಂದು ಹೇಳಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಬಹುತೇಕ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಿಲ್ಲ. ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಬೀದಿ ದೀಪಗಳು ಇಲ್ಲ. ಚರಂಡಿ ವ್ಯವಸ್ಥೆಯನ್ನು ಮಾಡಲಾಗಿಲ್ಲ. ಅಗರ ಮಾಂಬಳ್ಳಿ ಇನ್ನಿತರ ಕಡೆ ಗುಣಮಟ್ಟದ ಕಾಮಗಾರಿ ಆಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಸುನಿಲ್ ಬೋಸ್ ಮಾತನಾಡಿ, ‘ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಹಾಗಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಆಗಿರುವ ಸಂಬಂಧ ವರದಿ ನೀಡಬೇಕು. ಅರಣ್ಯ ವಾಸಿಗಳಿಗೆ ಮನೆಗಳನ್ನು ಒದಗಿಸುವ ಪ್ರಕ್ರಿಯೆ ಜರೂರಾಗಿ ನಡೆಯಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಅಗತ್ಯಕ್ಕೆ ಅಗುಣವಾಗಿ ಸಮಾನವಾಗಿ ಮನೆಗಳ ಹಂಚಿಕೆಯಾಗಬೇಕು’ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-37-263295052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.