ಕೊಳ್ಳೇಗಾಲ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಮದ್ಯ ವ್ಯಸನಿಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಮದ್ಯವ್ಯಸನಿಗಳು ಕುಳಿತುಕೊಳ್ಳುತ್ತಿದ್ದ ಕಲ್ಲುಗಳಿಗೆ ಆಯಿಲ್ ಸುರಿದು ಬಣ್ಣ ಬಳಿಯುತ್ತಿದ್ದಾರೆ.

ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ, ಮಧ್ಯ ರಂಗನಾಥ ಸ್ವಾಮಿ ದೇವಾಲಯ, ಸೋಮೇಶ್ವರ ದೇವಾಲಯ, ಶಿವನಸಮುದ್ರದ ಆದಿಶಕ್ತಿ ಮಾರಮ್ಮ ದೇವಾಲಯ, ದರ್ಗಾ ಕಾವೇರಿ ನದಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಶಿವನಸಮುದ್ರ ರಸ್ತೆಯ ಮೂಲಕ ಪ್ರವಾಸಿಗರು ತೆರಳಬೇಕಿದ್ದು, ಆ ರಸ್ತೆಯ ಮೇಲೆ ಮದ್ಯ ವ್ಯಸನಿಗಳು ಕುಳಿತು ಮದ್ಯಪಾನ ಮಾಡುತ್ತಿದ್ದರು. ಇದರಿಂದ ಪ್ರವಾಸಿಗರಿಗೆ ಪ್ರತಿನಿತ್ಯ ಕಿರಿಕಿರಿ ಉಂಟಾಗುತ್ತಿತ್ತು. ಇದೀಗ ಪೊಲೀಸರು ಇದಕ್ಕೆ ಕಡಿವಾಣ ಹಾಕಿದ್ದಾರೆ.

‘ಈ ಪ್ರವಾಸಿ ತಾಣಗಳನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದು, ಕಿರಿದಾದ ರಸ್ತೆಯಲ್ಲೇ ಎರಡು ಬದಿಯಲ್ಲಿ ಮದ್ಯ ಸೇವನೆ ಹೆಚ್ಚಾಗಿ ಮಾಡುತ್ತಿದ್ದರಿಂದ ತೊಂದರೆಯಾಗಿತ್ತು. ಈ ಬಗ್ಗೆ ಪ್ರಜಾವಾಣಿಯ ಮೇ 13ರ ಸಂಚಿಕೆಯಲ್ಲಿ ‘ರಸ್ತೆ ಬದಿಯಲ್ಲಿಯೇ ಮದ್ಯ ಸೇವನೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.

ಇದರಿಂದ ಎಚ್ಚೆತ್ತ ಗ್ರಾಮಾಂತರ ಪೊಲೀಸರು ರಸ್ತೆ ಬದಿಯಲ್ಲಿ ಮದ್ಯಪಾನ ಮಾಡದಂತೆ ಅರಿವು ಮೂಡಿಸಿದ್ದಾರೆ. ಅಲ್ಲದೇ ಬಾರ್ ಮಾಲೀಕರಿಗೂ ಎಚ್ಚರಿಕೆ ನೀಡಿದ್ದಾರೆ. ಕಲ್ಲುಗಳ ಮೇಲೆ ಆಯಿಲ್ ಹಾಗೂ ಬಣ್ಣವನ್ನು ಹಾಕಿದ್ದಾರೆ. ರಸ್ತೆಯ ಎರಡೂ ಬದಿಯನ್ನು ಪಂಚಾಯಿತಿಯವರಿಂದ ಸ್ವಚ್ಛಪಡಿಸಿದ್ದಾರೆ.

‘ಈ ಜಾಗದಲ್ಲಿ ಮದ್ಯಪಾನ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-37-2080880408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.