ಸಂತೇಮರಹಳ್ಳಿ: ಹೋಬಳಿಗೆ ಸೇರಿದ ಸುತ್ತೂರು ಗ್ರಾಮದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮದ ಪರಿಶಿಷ್ಟ ಸಮುದಾಯದ ಬಡಾವಣೆಯ ರಸ್ತೆ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್ಸಿಎಸ್ಪಿ ಯೋಜನೆಯಡಿಯಲ್ಲಿ ₹ 40 ಲಕ್ಷ ಅನುದಾನ ಬಿಡುಗಡೆಗೊಳಿಸಿ ರಸ್ತೆ ಅಭಿವೃದ್ಧಿಗೊಳಿಸಲಾಗುವುದು. ಇದೇ ರಸ್ತೆಗೆ ಸಂಪರ್ಕ ಕಲ್ಪಿಸುವ ಮತ್ತೊಂದು ಬಡಾವಣೆಯ ರಸ್ತೆಯ ಅಭಿವೃದ್ಧಿಗೆ ₹10 ಲಕ್ಷ ಬಿಡುಗಡೆಗೊಳಿಸಲಾಗಿದೆ. ಬಡಾವಣೆಯಲ್ಲಿ ಒಟ್ಟು ₹50 ಲಕ್ಷ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಕಾಮಗಾರಿ ನಿರ್ವಹಣೆಯನ್ನು ಭೂಸೇನಾ ನಿಗಮದ ಅಧಿಕಾರಿಗಳಿಗೆ ವಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ರಸ್ತೆ ಅಭಿವೃದ್ಧಿಯಲ್ಲಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗುಣಮಟ್ಟದ ಕಾಮಗಾರಿ ಮಾಡಬೇಕು. ನಿವಾಸಿಗಳು ಕಾಮಗಾರಿಗೆ ಸಹಕಾರ ನೀಡಿ ಉತ್ತಮ ಮಟ್ಟದಲ್ಲಿ ಬಡಾವಣೆಯ ರಸ್ತೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಮುಖಂಡರಾದ ಅಶೋಕ್, ನಾಗರಾಜು, ಶಿವಣ್ಣ, ನಾಗೇಂದ್ರ, ಮಹದೇವಸ್ವಾಮಿ, ಎಇಇ ಚಿಕ್ಕಲಿಂಗಯ್ಯ, ಜೆಇ ಮಧು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-37-1331165981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.