ಚಾಮರಾಜನಗರ: ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಜೂನ್ 6ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ 6ನೇ ಐಕ್ಯತಾ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ ಕುಮಾರ್ ತಿಳಿಸಿದರು.

ನಗರದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಐಕ್ಯತಾ ಸಮಾವೇಶದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ, ಶಿವರಾಜ ತಂತಂಗಡಗಿ, ಪ್ರಿಯಾಂಕ್ ಖರ್ಗೆ, ಡಾ.ಹೆಚ್.ಸಿ.ಮಹದೇವಪ್ಪ ಭಾಗವಹಿಸುವರು. ಸಮಾರೋಪದಲ್ಲಿ ವಿರೋಧ ಪಕ್ಷದ ನಾಯಕರು ಭಾಗವಹಿಸುವರು ಎಂದರು.

ಐಎಎಸ್ ಅಧಿಕಾರಿಗಳು ವಿಚಾರ ಮಂಡಿಸಲಿದ್ದಾರೆ. ಭಾಗವಹಿಸುವ ಸರ್ಕಾರಿ ನೌಕರರಿಗೆ ಎರಡು ದಿನಗಳು ಒಒಡಿ ಸೌಲಭ್ಯವನ್ನು ಸರ್ಕಾರ ಮಂಜೂರು ಮಾಡಲಿದೆ ಎಂದರು.

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್ಸಿ ಎಸ್ಟಿ ಸರ್ಕಾರಿ ನೌಕರರು, ಅಧಿಕಾರಿಗಳು, ವಿಶ್ವವಿದ್ಯಾಲಯ, ಅರೆ ಸರ್ಕಾರಿ, ಅನುದಾನಿತ ಸಂಸ್ಥೆಗಳ ಎಸ್ಸಿ, ಎಸ್ಟಿ ನೌಕರರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸೇವಾ ವಲಯಗಳಲ್ಲಿ ಮೀಸಲಾತಿ ಸೌಲಭ್ಯ ಅನುಷ್ಠಾನಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವುದು ಐಕ್ಯತಾ ಸಮಾವೇಶದ ಮುಖ್ಯ ಉದ್ದೇಶವಾಗಿದೆ. 30 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆ ಇದ್ದು, ಮಹಿಳಾ ನೌಕರರು ಹೆಚ್ಚಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಸ್ವಾಮಿ, ಸಂಘದ ಉಪಾಧ್ಯಕ್ಷ ಮಹೇಂದ್ರ, ರವಿಕುಮಾರ್, ಜಯಶಂಕರ್, ಮುರುಗೇಶ್ಕುಮಾರ್, ನಂಜುಂಡಸ್ವಾಮಿ, ಶಾಂತರಾಜು, ನಂದೀಶ್, ವೇಲುಕುಮಾರ್, ಸುಬ್ರಹ್ಮಣ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-94980401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.