ಚಾಮರಾಜನಗರ: ತಾಲ್ಲೂಕಿನ ಕಣ್ಣೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತ ತಲುಪಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಂಪೂರ್ಣವಾಗಿ ಬಾಗಿಕೊಂಡು ಬೀಳುವ ಹಂತದಲ್ಲಿರುವ ಕಾಂಪೌಂಡ್ಗೆ ಮರದ ದಿಮ್ಮಿಗಳನ್ನು ಆಸರೆಯಾಗಿ ಕೊಟ್ಟು ನಿಲ್ಲಿಸಲಾಗಿದೆ. ಜೂನ್ 1ರಿಂದ ಶಾಲೆ ಆರಂಭವಾಗುತ್ತಿದ್ದು ಅವಘಡ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ದುರಸ್ತಿ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಂಪೌಂಡ್ಗೆ ಹೊಂದಿಕೊಂಡಿರುವ ಗೇಟ್ ಮೂಲಕವೇ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸಬೇಕಿದ್ದು ಈ ಸಂದರ್ಭ ಕಾಂಪೌಂಡ್ ಕುಸಿಯವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-37-1070844211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.