ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಕಣಾಂಬಿ ಹುಂಡಿಯಲ್ಲಿ ಗ್ರಾಮಸ್ಥರ ವಿರೋಧದ ಮಧ್ಯೆಯೂ ಮದ್ಯ ಮಾರಾಟ ಮಳಿಗೆ ತೆರೆಯಲು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಜನರಲ್ ಲೈಸೆನ್ಸ್ ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಶಿಕುಮಾರ್ ಆರೋಪಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ಯದಂಗಡಿ ತೆರೆಯಲು ಉದ್ದೇಶಿಸಿರುವ ಜಾಗದಲ್ಲಿ ಜನವಸತಿ ಪ್ರದೇಶ, ಸಮೀಪದಲ್ಲಿ ದೇವಸ್ಥಾನ ಇದೆ. ಪ್ರತಿನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಾಗಿ ಓಡಾಡುತ್ತಾರೆ. ಈ ಭಾಗದಲ್ಲಿ ಮದ್ಯದಂಗಡಿ ಶುರು ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಲಾಗಲಿದೆ, ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿ ಮಹಿಳೆಯರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ತೆರಕಣಾಂಬಿಯಲ್ಲಿ ಹಲವು ಬಾರ್ಗಳಿದ್ದು ಮದ್ಯವ್ಯಸನಿಗಳ ಹಾವಳಿ ವಿಪರೀತವಾಗಿದೆ, ಮದ್ಯಸೇವಿಸಿ ಬಾಟಲಿ ಹಾಗೂ ಪೌಚ್ಗಳನ್ನು ರೈತರ ಕೃಷಿ ಭೂಮಿಗೆ ಬಿಸಾಡಲಾಗುತ್ತಿದ್ದು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ಹೀಗಿದ್ದರೂ ಮತ್ತೊಂದು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದು ಬೇಸರದ ಸಂಗತಿ ಎಂದರು.

ವರ್ಷದ ಹಿಂದೆ ತೆರಕಣಾಂಬಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯದಗಂಡಿಗೆ ಅನುಮತಿ ನೀಡಲು ಗ್ರಾಮಸಭೆಯಲ್ಲಿ ನಿರಾಕರಿಸಲಾಗಿತ್ತು. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಅವಧಿ ಮುಗಿದ ಬಳಿಕ ಪಿಡಿಒ ಮದ್ಯದ ಅಂಗಡಿಗೆ ಜನರಲ್ ಲೈಸೆನ್ಸ್ ಹಾಗೂ ಎನ್ಒಸಿ ನೀಡಿದ್ದು ಖಂಡನೀಯ. ಈ ಸಂಬಂಧ ಅಬಕಾರಿ ಅಧಿಕಾರಿ ಹಾಗೂ ಇನ್ಸ್ಪೆಕ್ಟರ್ಗೆ ಮನವಿ ಮಾಡಿದರೂ ಸ್ಥಳ ಮಹಜರು ಮಾಡುವಾಗ ದೂರುದಾರರನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ನಡೆಸಿ ವರದಿ ಸಲ್ಲಿಸಲಾಗಿದೆ.

ಗ್ರಾಮಸ್ಥರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ನೀಡಿದರೆ ಗ್ರಾಮಸ್ಥರೆಲ್ಲರೂ ಸೇರಿ ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮದ ಮುಖಂಢರಾದ ಸುರೇಶ್, ನಂದೀಶ್, ಪ್ರದೀಪ್, ವಿನೋದ್, ಮಂಜು, ಪ್ರತಾಪ್, ಶಂಭು, ಜಗದೀಶ್, ಮನೋಜ್, ಅಶೋಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1942377330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.