ಚಾಮರಾಜನಗರ: ಧೂಮಪಾನ ಮತ್ತು ತಂಬಾಕು ಉತ್ಪನ್ನಗಳನ್ನು ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ತಂಬಾಕು ಮುಕ್ತ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಕರೆ ನೀಡಿದರು.

ಮೈಸೂರಿನ ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ರೆಡ್ ಕ್ರಾಸ್, ರೋಟರಿ ಕ್ಲಬ್ ಅಸೋಸಿಯೇಷನ್ ಹಾಗೂ ಬಸವ ರಾಜೇಂದ್ರ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಂಡಿದ್ದ ವಾಕಥಾನ್ಗೆ ಚಾಲನೆ ನೀಡಿ ಮಾತನಾಡಿದರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗಂಗಾಧರ್ ಮಾತನಾಡಿ, ತಂಬಾಕು ಸೇವನೆಯಿಂದ ಜಗತ್ತಿನಲ್ಲಿ ಕೋಟ್ಯಂತರ ಮಂದಿ ಮೃತಪಟ್ಟಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿಯೇ ತಂಬಾಕು ಸೇವನೆಯತ್ತ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿರುವುದು ಆತಂಕದ ವಿಚಾರ. ಈಚೆಗೆ ಗಂಡು–ಹೆಣ್ಣು ಬೇಧವಿಲ್ಲದೆ ಎಲ್ಲರೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತಂಬಾಕು ಸೇವನೆ ಮಾಡಿದವರ ಪಕ್ಕದಲ್ಲಿದ್ದರೂ ಅಕ್ಕಪಕ್ಕದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಿದಂಬರಂ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆರಂಭದಲ್ಲಿ ಮೋಜಿಗಾಗಿ ಆರಂಭವಾಗುವ ಧೂಮಪಾನ ಬಳಿಕ ವ್ಯಸನವಾಗಿ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತದೆ. ಜೀವಕ್ಕೆ ಮಾರಕವಾಗಿರುವ ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದರು.

ಬಸವ ರಾಜೇಂದ್ರ ಆಸ್ಪತ್ರೆಯ ಡಾ.ಬಸವರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟವನ್ನು ನಿರ್ಬಂಧಿಸುವ ದೃಢ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಡಾ.ರವಿ ಮಾತನಾಡಿ ‘ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಗ್ಗೆ ಉದ್ಯಮಗಳ ಮೋಸದ ತಂತ್ರಗಳನ್ನು ಬಯಲಿಗೆಳೆಯುವುದು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳು ಹಾಗೂ ಕ್ಯಾನ್ಸರ್ ತಡೆಗಟ್ಟುವಿಕೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವಾಕಥಾನ್ನಲ್ಲಿ ಡಾ.ಶ್ವೇತಾ, ಡಾ.ರಕ್ಷಿತ್ ಶೃಂಗೇರಿ, ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಮಾಜಿ ಅಧ್ಯಕ್ಷ ಶ್ರೀನಿವಾಸನ್, ಸಿಮ್ಸ್ ಪ್ರಾಂಶುಪಾಲ ಡಾ.ಅಜಯ್, ಐಟಿಐ ಕಾಲೇಜು ಪ್ರಾಂಶುಪಾಲ ಡಾ.ರಂಗಸ್ವಾಮಿ,ಕ್ಲಿಯರ್ಮೆಡಿ ರೇಡಿಯಂಟ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವಿಭಾಗೀಯ ಮುಖ್ಯಸ್ಥ ರವಿಕುಮಾರ್, ವ್ಯವಹಾರ ಮುಖ್ಯಸ್ಥ ಚಲಂ, ಮಾರ್ಕೆಟಿಂಗ್ ಮ್ಯಾನೇಜರ್ ಸುನೀಲ್ ಕುಮಾರ್, ಮೋಹನ್ ಕುಮಾರ್, ನಿತಿನ್, ವಿಮಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-777535088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.