ಹನೂರು: ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕಿನ ಉಡುತೊರೆ ಜಲಾಶಯ ಯೋಜನೆಗೆ ₹490 ಕೋಟಿ ಅನುದಾನ ನೀಡಿದ್ದು ಇನ್ನೂ ಒಂದೂವರೆ ತಿಂಗಳ ಅವಧಿಯಲ್ಲಿ ಟೆಂಡರ್ ಕರೆಯಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಕೆರೆಗೆ ನೀರು ತುಂಬಿಸುವ ಅಚ್ಚುಕಟ್ಟು ಪ್ರದೇಶಗಳು ಮತ್ತು ಅರಣ್ಯ ಪ್ರದೇಶದಲ್ಲಿ ಬರುವಂತಹ ಕೆಲವು ಮಾರ್ಗಗಳನ್ನು ಹಾಗೂ ನೀರಿನ ಚೇಂಬರ್ಗಳ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದರು. ರಾಮಪುರ, ಅಜ್ಜಿಪುರ, ಮಾರ್ಟಳ್ಳಿ, ಕೌದಳ್ಳಿ ಭಾಗದ ಗ್ರಾಮಗಳ ಕೆರೆಗಳನ್ನು ತುಂಬಿಸುವ ಯೋಜನೆಗೆ ಬಜೆಟ್ನಲ್ಲಿ ಸರ್ಕಾರ ಅನುದಾನ ಮೀಸಲಿಟ್ಟಿದೆ. ಯೋಜನೆ ಸಂಬಂಧ ಎಲ್ಲಾ ಸಾಧಕ ಬಾಧಕಗಳನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಅಧಿಕಾರಿಗಳ ತಂಡ ಸಲ್ಲಿಸಿದೆ. ಮುಂದಿನ ತಿಂಗಳು ಹಣ ಬಿಡುಗಡೆಯಾಗಲಿದ್ದು, ಬಳಿಕ ಟೆಂಡರ್ ಕರೆದು ನೀರಾವರಿ ಯೋಜನೆಗೆ ಚಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಯೋಜನೆಯಿಂದ ಈ ಭಾಗದ ರೈತಾಪಿ ವರ್ಗದ ಜನರಿಗೆ ಕುಡಿಯುವ ನೀರಿನ ಸೌಕರ್ಯ ಮತ್ತು ವ್ಯವಸಾಯಕ್ಕೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇದಲ್ಲದೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿ ನೀರಿನ ಮಟ್ಟ ಹೆಚ್ಚಾಗಲಿದೆ. ಕಳೆದ ಐದು ಆರು ವರ್ಷದಿಂದ ಮಳೆ ಇಲ್ಲದೆ ವ್ಯವಸಾಯವು ಕೈಗೂಡದೆ ಸದಾ ತೊಂದರೆಯಲ್ಲಿದ್ದ ಈ ಭಾಗದ ಜನರಿಗೆ ಸರ್ಕಾರದ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗದೆ ಎಂದರು.

ಈ ಯೋಜನೆಯಿಂದ ವ್ಯವಸಾಯ ಕೃಷಿ ಚಟುವಟಿಕೆಗಳು ಮತ್ತೆ ಗರಿಗೆದರಲಿವೆ. ಮುಖ್ಯವಾಗಿ ಕೆರೆಗಳಿಗೆ ನೀರು ತುಂಬುವುದರಿಂದ ಹಳ್ಳ, ಚೆಕ್ ಡ್ಯಾಂಗಳಲ್ಲಿ ಸದಾ ನೀರಿನ ಹರಿವು ಇರುವುದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಲಿದೆ ಎಂದರು.

ಕಾವೇರಿ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ಮಹೇಶ್ ಮಾತನಾಡಿ, ಈಗಾಗಲೆ ಶಾಸಕರು ಮತ್ತು ಅಧಿಕಾರಿಗಳ ಜೊತೆ ಹಲವಾರು ಸಭೆಗಳನ್ನು ನಡೆಸಲಾಗಿದೆ. ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಕೂಲಂಕೂಸವಾಗಿ ಚರ್ಚೆಸಲಾಗಿದ್ದು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇನ್ನೂ 2-3 ತಿಂಗಳಲ್ಲಿ ಈ ಯೋಜನೆ ಕಾರ್ಯ ರೂಪಕ ಬರಲಿದೆ ಎಂದರು.

ಈ ವೇಳೆ ಕಾವೇರಿ ನೀರವಾರಿ ನಿಗಮದ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಕೆ.ಎಂ.ಉಮೇಶ್ , ಎಇಇ ಗಳಾದ ರಾಮಕೃಷ್ಣ, ಕರುಣಾಮಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-897482337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.