ಚಾಮರಾಜನಗರ: ‘ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು’ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ವಿಶ್ವವಿದ್ಯಾಲಯದ 2024–25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಸಂಭ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಸದುಪಯೋಗಪಡಿಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಕ್ರೀಡೆಗಳಲ್ಲಿ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿ.ವಿ ಕುಲಸಚಿವ ಆರ್.ಲೋಕನಾಥ್ ಮಾತನಾಡಿ ‘ಕ್ರೀಡೆಯಲ್ಲಿ ಸೋಲು–ಗೆಲುವು ಸಹಜ. ಆದರೆ ಭಾಗವಹಿಸುವಿಕೆ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸು ರೂಪುಗೊಳ್ಳಬೇಕಾದರೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆಗಳು ಸಹಕಾರಿಯಾಗಿದ್ದು, ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಶ್ವವಿದ್ಯಾನಿಲಯದ ಕ್ರೀಡಾ ಸಮಿತಿಯ ಸದಸ್ಯ ಜಿ.ಬಂಗಾರು, ಉಪನ್ಯಾಸಕ ಮಹೇಶ್, ಎನ್ಎಸ್ಎಸ್ ಅಧಿಕಾರಿ ಮಹೇಶ್, ಮಹದೇವ ಮೂರ್ತಿ, ಶಿವರಾಜು, ಬಸವಣ್ಣ ಮೂಕಹಳ್ಳಿ, ನಿಂಗರಾಜು, ಚೇತನ್, ಸಚಿನ್, ಚಾಮರಾಜು, ಜಗದೀಶ್, ಮಹೇಶ್ ಬಾಬು, ಭವ್ಯ, ಸವಿತಾ ಶಶಿಕಲಾ, ನಂದಿನಿ ಗ್ರಂಥಪಾಲಕ ರಾಘವೇಂದ್ರ, ಬೋಧಕೇತರ ವರ್ಗದ ಕುಮಾರ್ ಚಿಕ್ಕಹೊಳೆ, ಪ್ರಮೋದ್ ಮಹದೇವಸ್ವಾಮಿ, ರಾಜೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.