ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದಷ್ಟೆ ಆಸಕ್ತಿಯನ್ನು ಕ್ರೀಡಾ ಚಟುವಟಿಕೆಗಳಿಗೂ ತೋರಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಭಿಪ್ರಾಯಪಟ್ಟರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಚಾಮರಾಜನಗರ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ‘ಭಾರತ ಕ್ರೀಡಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. ಈಚೆಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕುರುಬೂರಿನ ಚೈತ್ರಾ ಕೊಕ್ಕೊ ಕ್ರೀಡೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಗ್ರಾಮೀಣ ಭಾಗದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯೊಂದಿಗೆ ಅಭ್ಯಾಸ ಮಾಡಬೇಕು, ಕ್ರೀಡಾ ಸಾಧಕರಿಗೆ ವಿಪುಲ ಅವಕಾಶಗಳಿದ್ದು ಸದ್ಬಳಕೆ ಮಾಡಿಕೊಳ್ಳಬೇಕು, ಕ್ರೀಡೆ ದೈಹಿಕ ಮತ್ತು ಮಾನಸಿಕ ಸದೃಢತೆ ತಂದುಕೊಡಬಲ್ಲದು ಎಂದರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಕೆ.ಎಂ.ಮಹಾದೇವನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋತಾಗ ಬೇಸರಿಸಿಕೊಳ್ಳದೆ ಗೆದ್ದಾಗ ಪ್ರೇರಣೆಯೊಂದಿಗೆ ಮುನ್ನುಗ್ಗಬೇಕು. ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಸಮಯ ಪ್ರಜ್ಞೆ, ಪರಿಶ್ರಮ, ಸ್ಪಷ್ಟ ಗುರಿ ಇದ್ದರೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು. ಕ್ರೀಡಾ ಪ್ರತಿಭೆಗಳು ಅನಾವರಣಗೊಳ್ಳಲು ಕ್ರೀಡಾಕೂಟಗಳು ಸಹಕಾರಿ ಎಂದರು.

ಚಾಮರಾಜನಗರ ವಿಶ್ವವಿದ್ಯಾಲಯ ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡುತ್ತಿದೆ. ವಿಶ್ವವಿದ್ಯಾಲಯದಲ್ಲಿ ಕಲಿತ ವಿದ್ಯಾರ್ಥಿಗಳು ಹಲವು ಕ್ಷೇತ್ರಗಳಲ್ಲಿ ಬದುಕು ಕಟ್ಟಿಕೊಂಡಿದ್ದು ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ವಿ.ವಿಗೆ ಹೆಮ್ಮೆ ಎಂದರು.

ಕ್ರೀಡಾಕೂಟದ ಆಯೋಜಕ ಮಹೇಶ್ ನಾಯಕ್, ವರ ಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಬಂಗಾರು, ಕ್ರೀಡಾಪಟು ಕಾರ್ತಿಕ್ ನಾಯಕ್, ವಿವಿ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-37-1152469201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.