ಚಾಮರಾಜನಗರ: ಕರ್ನಾಟಕ ರಾಜ್ಯ ಸಂಸ್ಥಾಪನಾಚಾರ್ಯರಾದ ವಿದ್ಯಾರಣ್ಯರ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಆಚರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ತತ್ವಜ್ಞಾನಿ ವಿದ್ಯಾರಣ್ಯ ಮಹರ್ಷಿಗಳ ಸಂದೇಶ ಮತ್ತು ಕೊಡುಗೆಗಳ ಕುರಿತು ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಮೂಲಕ ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ, ವಾಸ್ತುಶಿಲ್ಪದ ಮಹತ್ವವನ್ನು ಜಗತ್ತಿಗೆ ತಿಳಿಸಿದ ಚಿಂತಕ, ಸಾಹಿತಿಗಳಾದ ವಿದ್ಯಾರಣ್ಯರ ಜಯಂತಿಯನ್ನು ಆಚರಿಸುವ ಮೂಲಕ ಅವರ ಸಾಧನೆಗಳನ್ನು ಯುವ ಜನಾಂಗಕ್ಕೆ ತಿಳಿಸಬೇಕು ಎಂದರು.

13ನೇ ಶತಮಾನದಲ್ಲಿ ಹರಿಹರ ಮತ್ತು ಬುಕ್ಕರಾಯರ ಮೂಲಕ ಕನ್ನಡ ಸಾಮ್ರಾಜ್ಯವನ್ನು ಸ್ಥಾಪಿಸಿ ದಕ್ಷಿಣ ಭಾರತದಲ್ಲಿ ಕನ್ನಡ ಸಂಸ್ಕೃತಿಯನ್ನು ಮತ್ತು ಪರಂಪರೆಯನ್ನು ಸಂರಕ್ಷಿಸಿ ಭಾರತೀಯ ಸನಾತನ ಧರ್ಮವನ್ನು ಉಳಿಸಿ ಬೆಳೆಸಿದ ಕೀರ್ತಿ ವಿದ್ಯಾರಣ್ಯರಿಗೆ ಸಲ್ಲುತ್ತದೆ. ಆಡಳಿತ ಸೇವೆ ಆಧ್ಯಾತ್ಮ, ಧರ್ಮ, ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ನೃತ್ಯ ಕಲೆ ಹೀಗೆ ಹಲವು ಕಲಾ ಪ್ರಕಾರಗಳ ಹಾಗೂ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ವಿದ್ಯಾರಣ್ಯರು ಕಾರಣೀಕರ್ತರಾಗಿದ್ದಾರೆ ಎಂದು ಹೇಳಿದರು.

ಅವರ ಜಯಂತಿಯನ್ನು ವೈಭವದಿಂದ ಆಚರಿಸುವ ಮೂಲಕ ಸಂಸ್ಕೃತಿ ಪರಂಪರೆಯ ಸಂದೇಶಗಳನ್ನು ಪ್ರತಿಯೊಬ್ಬರ ಮನೆಗಳಿಗೆ ತಲಪಿಸಬೇಕು. ಶೃಂಗೇರಿಯ ಶಾರದಾ ಪೀಠದ ಜಗದ್ಗುರುವಾಗಿ ವೇದಗಳಿಗೆ ವ್ಯಾಖ್ಯಾನ ನೀಡಿದ ವಿದ್ಯಾರಣ್ಯರು ಸರ್ವದರ್ಶನ ಸಂಗ್ರಹ, ಪಂಚದಶಿ, ಕಾಲ ಮಾಧವ ಮುಂತಾದ ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಗತ್ತಿಗೆ ಮಾರ್ಗದರ್ಶಕ ದಿವ್ಯ ಅನುಭವ, ಸಂದೇಶ, ನುಡಿಗಳನ್ನು ನೀಡಿರುವ ವಿದ್ಯಾರಣ್ಯರ ಸಮಗ್ರ ಸಾಹಿತ್ಯ ಮತ್ತು ಚಿಂತನೆಗಳು ಪ್ರಕಟಿಸಿ ಎಲ್ಲರಿಗೂ ತಲುಪಿಸುವ ಕಾರ್ಯ ಆಗಬೇಕಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಎಲ್.ಶಿವಲಿಂಗ ಮೂರ್ತಿ ಮಾತನಾಡಿ ವಿಜಯನಗರ ಸಾಮ್ರಾಜ್ಯದ ಆಡಳಿತ ಮಾದರಿಯಾಗಿದ್ದು ಕಲೆ, ಸಂಗೀತ, ಸಾಹಿತ್ಯಕ್ಕೆ ಹೆಸರುವಾಸಿಯಾಗಿದೆ. ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ವಿದ್ಯಾರಣ್ಯರು ಮೂಲ ಕಾರಣಕರ್ತರಾಗಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಬಿ.ಕೆ.ಆರಾಧ್ಯ ಮಾತನಾಡಿ ‘ಆಧ್ಯಾತ್ಮಿಕ ಚಿಂತಕರು, ಸಂಸ್ಕೃತಿಯ ಪ್ರೇರಕರು, ಧರ್ಮದ ಉಳಿವಿಗಾಗಿ ಶ್ರಮಿಸಿರುವ ವಿದ್ಯಾರಣ್ಯರ ನುಡಿಗಳು, ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ ಎಂದರು. ಕಾರ್ಯಕ್ರಮದಲ್ಲಿ ಕುಮಾರ್, ಸುರೇಶ್, ಮುರುಗೇಶ್, ದೊಡ್ಡರಾಜು,ಸಿದ್ದೇಶ್, ಗಣೇಶ್, ಮನೋಜ್, ಹರಿಹರನ್, ಯೋಗೀಶ್, ವೇದಾಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-37-730550702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.