ಚಾಮರಾಜನಗರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಸೇರ್ಪಡೆ, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಖಚಿತಪಡಿಸಿಕೊಳ್ಳಲು ಹಾಗೂ ಮುಕ್ತ, ನಿಷ್ಪಕ್ಷಪಾತ ಚುನಾವಣೆ ನಡೆಸಲು, ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಹೆಚ್ಚಿಸಲು ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿದೆ ಎಂದರು.

ಅ.1 2026 ಅನ್ನು ಅರ್ಹತಾ ದಿನಾಂಕವನ್ನಾಗಿ ಮಾನದಂಡವನ್ನಾಗಿಟ್ಟುಕೊಂಡು ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಜೂನ್ 20 ರಿಂದ 29ರವರೆಗೆ ತರಬೇತಿ, ನಮೂನೆ ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ–ಮನೆಗೆ ಭೇಟಿ ನೀಡಲಿದ್ದಾರೆ.

ಮತಗಟ್ಟೆಗಳ ಪುನರ್ ವಿಂಗಡಣೆ ಪ್ರಕ್ರಿಯೆ ಜುಲೈ 29ರೊಳಗೆ ಪೂರ್ಣಗೊಳ್ಳಲಿದೆ. ಆ.5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆ.5ರಿಂದ ಸೆ.4ರವರೆಗೆ ಹಕ್ಕು ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶವಿದೆ. ಆ.5 ರಿಂದ ಅ.3ರವರೆಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅ.7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ 983 ಬೂತ್ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜೂನ್ 1ಕ್ಕೆ ಜಿಲ್ಲೆಯಲ್ಲಿ 8,79,752 ಮತದಾರರಿದ್ದು ವಿಶೇಷ ಸಮಗ್ರ ಪರಿಷ್ಕರಣೆ ಎಲ್ಲ ಮತದಾರರನ್ನು ಒಳಗೊಳ್ಳಲಿದೆ. ಈವರೆಗೆ ಜಿಲ್ಲೆಯಲ್ಲಿ ಶೇ 96.88ರಷ್ಟು ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದೆ.

ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿ.ಎಲ್.ಒ ಗಳು ಪ್ರತಿ ಮನೆಗಳಿಗೆ ಭೇಟಿನೀಡಿ ಮತದಾರರಿಗೆ ನಕಲು ಪ್ರತಿಗಳಲ್ಲಿ ಗಣತಿ ನಮೂನೆ ಪ್ರತಿಯನ್ನು ವಿತರಿಸಲಿದ್ದಾರೆ. ಎರಡನೇ ಭೇಟಿಯಲ್ಲಿ ಬಿ.ಎಲ್.ಒಗಳು ಮತದಾರರು ಭರ್ತಿ ಮಾಡಿದ ಫಾರಂ ಅನ್ನು ಸಂಗ್ರಹಿಸಿ ಸ್ವೀಕೃತಿ ನೀಡುತ್ತಾರೆ. ಮತದಾರರು ಹಿಂದಿನ ಎಸ್.ಐ.ಆರ್ನ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಒದಗಿಸಬೇಕು. ಹಿಂದಿನ ಎಸ್.ಐ.ಆರ್ ಮಾಹಿತಿಯನ್ನು https://voters.eci.gov.in ರಲ್ಲಿ ಪಡೆಯಬಹುದು.

ಬಿ.ಎಲ್.ಒಗಳು ಮತದಾರರಿಂದ ಫಾರಂ ಸಂಗ್ರಹಿಸಲು ಮೂರು ಬಾರಿ ಭೇಟಿ ನೀಡಲಿದ್ದಾರೆ. ಮನೆ ಬೀಗ ಹಾಕಿದ್ದರೆ ಫಾರಂ ಅನ್ನು ಮನೆಗೆ ಅಂಟಿಸಲಾಗುತ್ತದೆ, ನೆರೆ ಹೊರೆಯವರ ಸಹಾಯ ಪಡೆದು ಮನೆಯ ಮಾಲೀಕರನ್ನು ಸಂಪರ್ಕಿಸುವ ಯತ್ನ ಮಾಡಲಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಹಾಗೂ ಫಾರಂಗಳನ್ನು ಸ್ವೀಕರಿಸದಿದ್ದಲ್ಲಿ ಮತದಾರರನ್ನು ಪಟ್ಟಿಯಿಂದ ಹೆಸರು ಕೈಬಿಡಲಾಗುವುದು. ಹೊಸ ಮತದಾರರು ಘೋಷಣೆಯೊಂದಿಗೆ ನಮೂನೆ 6 ಸಲ್ಲಿಸಬೇಕು ಜಿಲ್ಲಾಧಿಕಾರಿ ವಿವರಿಸಿದರು.

ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ಹೆಸರು ಸೇರ್ಪಡೆಗಾಗಿ ಫಾರಂ 6 ಹಾಗೂ 8 ನೀಡಲಾಗುತ್ತದೆ. ಮತದಾರರ ಪಟ್ಟಿಯಿಂದ ಹೊರಗಿಡುವಿಕೆ, ಅಳಿಸುವಿಕೆ ಆಕ್ಷೇಪಣೆಗಳಿಗೆ ಫಾರಂ 7 ಸಲ್ಲಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-29023436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.