ಚಾಮರಾಜನಗರ: ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತುರ್ತು ಸ್ಪಂದಿಸಬೇಕು, ಅಗತ್ಯವಿರುವೆಡೆ ಬೋರ್ವೆಲ್ ಕೊರೆಸಿ ನೀರು ಸರಬರಾಜು ಮಾಡಬೇಕು, ಟ್ಯಾಂಕರ್ಗಳ ಮೂಲಕವೂ ನೀರು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿಯ ಕೆಡಿಪಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತುರ್ತು ಸ್ಪಂದಿಸಬೇಕು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖುದ್ದು ಭೇಟಿ ನೀಡುತ್ತೇನೆ. ಸಮಸ್ಯೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಸಿಟ್ಟಿಗೆದ್ದ ಶಾಸಕ: ಚಾಮರಾಜನಗರ ತಾಲ್ಲೂಕಿನಲ್ಲಿ 43 ಗ್ರಾಮ ಪಂಚಾಯಿತಿಗಳಿದ್ದು ಪುಣಜನೂರು, ಕೊತ್ತಲವಾಡಿ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಎತ್ತೇಗೌಡನ ದೊಡ್ಡಿ ಗ್ರಾಮಕ್ಕೆ ಖಾಸಗಿ ಬೋರ್ವೆಲ್ ಹಾಗೂ ಉಗನೇದಹುಂಡಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಗಿರಿಧರ್ ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಸಿಟ್ಟಿಗೆದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದರೂ ಸಭೆಗೆ ತಪ್ಪು ಮಾಹಿತಿ ನೀಡಬೇಡಿ, ಪುಣಜನೂರು ಪಂಚಾಯಿತಿ ಜೆಜೆಎಂ ಯೋಜನೆಯಿಂದ ವಂಚಿತವಾಗಿದ್ದು ಬೇಡಗುಳಿ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಏಕೆ ಮಾಹಿತಿ ನೀಡುತ್ತಿಲ್ಲ ಎಂದು ಹರಿಹಾಯ್ದರು.

ಬೇಡಗುಳಿ ಗ್ರಾಮದಲ್ಲಿ ಹರಿಯುವ ಝರಿಯಿಂದ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡಲು ₹ 1.50 ಕೋಟಿ ಬಿಡುಗಡೆಯಾಗಿದ್ದರೂ ಕಾಮಗಾರಿ ಪೂರ್ಣಗೊಳಿಸದಿರುವುದು ಅಧಿಕಾರಿಗಳ ಕರ್ತವ್ಯಲೋಪ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಕುಡಿಯುವ ನೀರಿನ ಸಮಸ್ಯೆ ಇರುವ ನಿರ್ದಿಷ್ಟ ಪಂಚಾಯಿತಿ, ಗ್ರಾಮಗಳ ಹೆಸರು, ತೆಗೆದುಕೊಂಡ ಕ್ರಮಗಳು, ಸರ್ಕಾರದಿಂದ ಏನಾಗಬೇಕು ಎಂದು ಸವಿಸ್ತಾರವಾಗಿ ತಿಳಿಸಬೇಕು ಎಂದು ಗದರಿದ ಸಚಿವರು ಜೆಜೆಎಂ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲದಿರುವುದು ಸಮಸ್ಯೆಗೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಲಜೀವನ್ ಮಿಷನ್ ಅಸ್ತವ್ಯಸ್ತ: ಇರಸವಾಡಿ, ಸುತ್ತೂರು, ಗಂಗವಾಡಿ, ರೇಚಂಬಳ್ಳಿ, ಕೆಂಪನಪುರ, ಸಿಂಗನಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಅಸ್ತವ್ಯಸ್ತಗೊಂಡಿದೆ. ಪೈಪ್ಲೈನ್ ಅಳವಡಿಕೆಗೆ ರಸ್ತೆಗಳನ್ನು ಅಗೆದು ಗುಂಡಿಗಳನ್ನು ಮುಚ್ಚಿಲ್ಲ, ಅರ್ಧಂಬರ್ಧ ಪೈಪ್ಲೈನ್ ಕಾಮಗಾರಿ ಮಾಡಲಾಗಿದೆ. ಮೂರು ಅಡಿ ಆಳಕ್ಕೆ ಪೈಪ್ಲೈನ್ ಹಾಕುವ ಬದಲು 1 ಅಡಿಗೆ ಹಾಕಿರುವುದರಿಂದ ಪೈಪ್ಗಳು ಒಡೆದುಹೋಗುತ್ತಿದ್ದು ನೀರು ಪೋಲಾಗುತ್ತಿದೆ.

ಕಾಮಗಾರಿ ಮುಗಿಯದಿದ್ದರೂ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಿರುವುದು ಅಧಿಕಾರಿಗಳ ‘ಅಡ್ಜೆಸ್ಟ್ಮೆಂಟ್’ನಂತೆ ಕಾಣುತ್ತಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸುವ ಜಿಲ್ಲಾಮಟ್ಟದ ಅಧಿಕಾರಿಗಳ ತಂಡವನ್ನು ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನೆಗೆ ನಿಯೋಜಿಸಿ ವರದಿ ಪಡೆದುಕೊಳ್ಳಿ, ಲೋಪಗಳು ಕಂಡುಬಂದರೆ ಆಯಾ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಎಂದು ಸಚಿವರು ಸೂಚಿಸಿದರು.

ಚಾಮರಾಜನಗರ ನಗರಸಭೆ ವ್ಯಾಪ್ತಿಯ ಎಲ್ಲ ಬಡಾವಣೆಗಳಿಗೆ ವಾರಕ್ಕೆರಡು ಬಾರಿ ಕಾವೇರಿ ನೀರು ಸರಬರಾಜು ಮಾಡಲಾಗುತ್ತಿದೆ, ಸಮಸ್ಯೆ ಇರುವ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಕೊಡಲಾಗುತ್ತಿದೆ ಎಂದು ನಗರಸಭೆ ಎಂಜಿನಿಯರ್ ಪ್ರಕಾಶ್ ಮಾಹಿತಿ ನೀಡಿದರು. ನಗರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬಗೆಹರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಹನೂರು ಇಒ ಮಾತನಾಡಿ, ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಟ್ಯಾಂಕರ್ ಹಾಗೂ ಖಾಸಗಿ ಬೋರ್ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿಯವರೆಗೂ 38 ರೀಬೋರ್ ಮಾಡಿಸಲಾಗಿದೆ, ನೀರು ಕಡಿಮೆಯಾಗಿರುವ ಕೊಳವೆ ಬಾವಿಗಳಲ್ಲಿ ಸಾವಿರ ಅಡಿವರೆಗೆ ಕೊರೆಸಿ ನೀರೆತ್ತಲಾಗುತ್ತಿದೆ. 24 ಕಡೆ ಹೊಸದಾಗಿ ರೀ ಬೋರ್ ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹನೂರು ಕ್ಷೇತ್ರದ ಶಾಸಕ ಮಂಜುನಾಥ್ ಮಾತನಾಡಿ, ‘ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಅರಣ್ಯ ಕಾನೂನುಗಳ ಅಡ್ಡಿಯಿಂದ 292 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಅನುಷ್ಠಾನಗೊಂಡಿಲ್ಲ. ಹಿಂದೆ ಜನವಸತಿ ಪ್ರದೇಶಗಳನ್ನೂ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿರುವುದರಿಂದ ಕಾಮಗಾರಿಗೆ ಎನ್ಟಿಸಿಎ ನಿಯಮಗಳು ಅಡ್ಡಿಯಾಗುತ್ತಿವೆ. ಹಿಂದೆಯೇ ಕೆಲವು ಗ್ರಾಮಗಳನ್ನಾದರೂ ಹೊರಗಿಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಪ್ರಸ್ತುತ ಇಡೀ ತಾಲ್ಲೂಕಿನ ಜನರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ನಿಯಮಗಳನ್ನು ಸಡಿಲಗೊಳಿಸಿ ಮಾನವೀಯತೆಯಿಂದ ವರ್ತಿಸಬೇಕು, ಜನರಿಗೆ ನೀರು ಕೊಡಲು ಸಾಧ್ಯವಾಗದಿದ್ದರೆ ವರ್ಗಾವಣೆ ಮಾಡಿಸಿಕೊಂಡು ಬೇರೆ ಜಿಲ್ಲೆಗಳಿಗೆ ಹೊರಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಗದರಿದರು.

ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನ), ಜಿಲ್ಲಾಧಿಕಾರಿ ಶ್ರೀರೂಪಾ, ಎಸ್ಪಿ ಎಂ.ಮುತ್ತುರಾಜ್, ಹೆಚ್ಚುವರಿ ಡಿ.ಸಿ ಜವರೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-1344488479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.