ಮೈಸೂರು: ‘ಜಯದೇವ ಹೃದ್ರೋಗ ಸಂಸ್ಥೆ ಯಿಂದ ಚಾಮರಾಜ ನಗರದಲ್ಲಿ ಅಲ್ಲಿನ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ’ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ತಿಳಿಸಿದರು.

ಇಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕ ಪ್ರಾರಂಭಿಸಿ, ಹೃದಯ ಸಮಸ್ಯೆ ಇರುವವರಿಗೆ ಪ್ರತಿ ಸೋಮವಾರ ಅಥವಾ ಬುಧವಾರ ತಪಾಸಣೆ ನಡೆಸಲಾ ಗುವುದು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆಸಲಾಗುವುದು’ ಎಂದರು.

‘ಮಳೆಗಾಲ ಪ್ರಾರಂಭ ಆಗುತ್ತಿರುವುದರಿಂದ ಹೃದಯಾಘಾತದ ಬಗ್ಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಉತ್ತರ ಭಾರತದಲ್ಲಿ ಬಿಸಿಲಿನ ಬೇಗೆಗೆ ಶರೀರದಲ್ಲಿ ನೀರಿನ ಕೊರತೆ ಉಂಟಾಗಿ ಬೇರೆ ಬೇರೆ ಕಾಯಿಲೆ ಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ಹೃದಯ ರೋಗಿಗಳು ಪ್ರತಿ 3 ತಿಂಗಳಿಗೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮದ್ಯಪಾನ, ಧೂಮಪಾನ, ಮಾದಕವಸ್ತುಗಳ ಸೇವನೆಯನ್ನು ತ್ಯಜಿಸಿ ಉತ್ತಮವಾದ ಜೀವನಶೈಲಿ ಅಳವಡಿಸಿಕೊಳ್ಳಬೇಕು. ವ್ಯಾಯಾಮ, ನಡಿಗೆಯ ಅಭ್ಯಾಸ ರೂಢಿಸಿಕೊಳ್ಳಬೇಕು’ ಎಂದರು.

‘ಮನೆ ಆಹಾರ ಸೇವಿಸಬೇಕು. ಸೊಪ್ಪು, ಕಾಳು, ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಬೇಕರಿ ತಿನಿಸುಗಳನ್ನು ತಿನ್ನಬಾರದು. 40 ವರ್ಷ ಮೇಲಿನವರು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ’ ಎಂದರು.

‘ಬೆಂಗಳೂರಿನ ಗೋವಿಂದರಾಜ ನಗರ, ಚರಕ ಆಸ್ಪತ್ರೆಗಳಲ್ಲೂ 3 ತಿಂಗಳಲ್ಲಿ ಜಯದೇವ ಹೃದ್ರೋಗ ಘಟಕ ಪ್ರಾರಂಭಿಸಲಾಗುತ್ತಿದೆ. ಮೈಸೂರಿನಲ್ಲಿ 200 ಹಾಸಿಗೆಗಳ ಹೆಚ್ಚುವರಿ ಕಟ್ಟಡಕ್ಕೆ ಇನ್ನೊಂದು ತಿಂಗಳಲ್ಲಿ ಶಂಕುಸ್ಥಾಪನೆ ನಡೆಸುತ್ತೇವೆ. ಹುಬ್ಬಳ್ಳಿಯಲ್ಲಿ 437 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆಯನ್ನು ಸೆಪ್ಟೆಂಬರ್ನಲ್ಲಿ ಸಾರ್ವಜನಿಕರ ಸೇವೆಗೆ ಸಿದ್ಧವಾಗಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-1491682374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.