ಸಂತೇಮರಹಳ್ಳಿ: ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಕಾವಿ ಬಸವೇಶ್ವರ ಗ್ರಾಮ ಪಂಚಾಯಿತಿ ಮಟ್ಟದ 8ನೇ ವಾರ್ಷಿಕೋತ್ಸವ ಹಾಗೂ ಸರ್ವ ಸದಸ್ಯರ ಸಭೆ ಮಂಗಳವಾರ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಮಾತನಾಡಿ, ‘ಮಹಿಳಾ ಸಂಘದ ಸದಸ್ಯರು ಸರ್ಕಾರದಿಂದ ಬರುವ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಜೀವನೋಪಾಯ ಕೌಶಲಗಳ ತರಬೇತಿ ನೀಡುತ್ತಿದ್ದು, ಮಹಿಳೆಯರು ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೌಶಲಗಳ ಬಗ್ಗೆ ತಿಳಿದುಕೊಳ್ಳಬೇಕು. ನಂತರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.

‘ಸರ್ಕಾರದ ಯೋಜನೆಗಳು ಸದ್ಬಳಕೆಯಾಗಬೇಕಾದರೆ ಪಡೆದ ಸೌಲಭ್ಯಗಳಲ್ಲಿ ಅಭಿವೃದ್ಧಿಯನ್ನು ಕಾಣಬೇಕು. ಇದರಿಂದ ಮಹಿಳಾ ಸಬಲೀಕರಣವಾಗಲು ಸಾಧ್ಯವಾಗುತ್ತದೆ’ ಎಂದರು.

‘ಮಹಿಳೆಯರು ಯಾವುದೇ ಸಮಸ್ಯೆಗಳು ಬಾರದ ರೀತಿಯಲ್ಲಿ ಸಂಘಗಳನ್ನು ಉತ್ತಮವಾಗಿ ಮುನ್ನಡೆಸಿಕೊಂಡಾಗ ಮಾತ್ರ ಸಂಘಗಳು ಅಭಿವೃದ್ಧಿ ಕಾಣುತ್ತವೆ. ಸಂಘಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಪಡೆದ ಸಾಲವನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಸಕಾಲದಲ್ಲಿ ಮರು ಪಾವತಿ ಮಾಡುವ ಮೂಲಕ ಸಂಘದ ಯಶಸ್ಸಿಗೆ ಎಲ್ಲರು ಸಹಕರಿಸಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ವೇಣುಗೋಪಾಲ್, ಸಂಘದ ಯೋಜನಾಧಿಕಾರಿ ಬಾಲರಾಜು, ಮಹದೇವಸ್ವಾಮಿ, ಕೆ.ಎಂ. ಪವಿತ್ರಾ, ಮೇಘನಾ, ಮಹೇಶ್ವರಿ, ಅಂಬಿಕಾ, ಶಾರದಾ, ಜಗದಾಂಬ, ಎಂ.ಬಿ.ಕೆ.ಶಾಂತಕುಮಾರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-37-1847078143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.