ಚಾಮರಾಜನಗರ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮನೋನಿಧಿ ವಿದ್ಯಾಸಂಸ್ಥೆಯಿಂದ ಜಾಗೃತಿ ಜಾಥಾ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಈ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗದಿಂದ ಪ್ರಾರಂಭಗೊಂಡ ಜಾಥಾವು ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದಿಂದ ಚಾಮರಾಜೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅಂತ್ಯಗೊಂಡಿತು.

ಬಳಿಕ ದೇವಾಲಯದ ಆವರಣದಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಕುರಿತು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕಿರು ನಾಟಕ ಹಾಗೂ ಮೂಕಾಭಿನಯವನ್ನು ಪ್ರದರ್ಶನ ಮಾಡಿದರು. ವಿದ್ಯಾಸಂಸ್ಥೆಯ ಮುಖ್ಯಸ್ಥೆ ಡಾ.ಶೈಲಜಾ ಕೃಪಾನಿಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲ್ಬರ್ಟ್ ಮನೋರಾಜ್, ಸದಸ್ಯರಾದ ಸ್ತುತ್ಯ ಮನೋನಿಧಿ ಮತ್ತು ಸ್ತೋತ್ರ ಮನೋನಿಧಿ, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಪಿ.ಯು ಕಾಲೇಜು, ಅಲ್ಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-232631636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.