ಚಾಮರಾಜನಗರ: ನಗರದಲ್ಲಿ ಸಮರ್ಪಕವಾಗಿ ಕಸ ಸಂಗ್ರಹ, ವಿಲೇವಾರಿ ನಡೆಯುತ್ತಿಲ್ಲ, ಎಲ್ಲೆಂದರಲ್ಲಿ ತ್ಯಾಜ್ಯ ಹರಡಿದ್ದು ಅನೈರ್ಮಲ್ಯ ಹೆಚ್ಚಾಗಿದೆ, ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ ಎಂದು ನಗರಸಭೆ ಸದಸ್ಯರೆಲ್ಲರೂ ಪೌರಾಯುಕ್ತರ ವಿರುದ್ಧ ಮುಗಿಬಿದ್ದರು.

ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಗರಸಭೆ ಸದಸ್ಯರಾದ ಮಹೇಶ್, ಖಲೀಲ್ ಅಹಮದ್, ಭಾಗ್ಯಾ, ಸುದರ್ಶನ ಗೌಡ, ಕುಮುದಾ, ಚಿನ್ನಮ್ಮ ಸೇರಿದಂತೆ ಹಲವು ಸದಸ್ಯರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು ಅತ್ತ ಕಾವೇರಿ ನೀರೂ ಬಿಡುತ್ತಿಲ್ಲ, ಇತ್ತ ಬೋರ್ವೆಲ್ಗಳಿಂದಲೂ ನೀರು ಕೊಡದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ಕೂಡಲೇ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರ ಸಂಚಾರ ಮಾಡಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವ ವಾರ್ಡ್ಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಬೇಕು, ಬೋರ್ವೆಲ್ಗಳ ರೀಚಾರ್ಜ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಪೌರಾಯುಕ್ತ ಪ್ರಕಾಶ್ ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸುವದಾಗಿ ಭರವಸೆ ನೀಡಿದರು.

ಎಸ್ಡಿಪಿಐ ಸದಸ್ಯ ಅಬ್ರಾರ್ ಅಹಮದ್ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ನಗರಸಭೆ ಸಂಪೂರ್ಣ ವಿಫಲವಾಗಿದೆ, ನಗರಸಭಾ ಸದಸ್ಯರ ಅಧಿಕಾರಾವಧಿ ನವೆಂಬರ್ ಮೊದಲ ವಾರದಲ್ಲಿ ಮುಕ್ತಾಯವಾಗಲಿದ್ದು ಅಷ್ಟರೊಳಗೆ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಾಕಿ ಇರುವ ಇ ಸ್ವತ್ತುಗಳ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಕಟ್ಟಡ ನಿರ್ಮಾಣ ಪರವಾನಗಿ ವಿತರಿಸಬೇಕು, ಹಿಂದಿನ ಪೌರಾಯುಕ್ತರ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು, ಕಾಮಗಾರಿಗಳ ಬಿಲ್ಗಳನ್ನು ಪರಿಶೀಲಿಸಿ ಮಂಜೂರು ಮಾಡಬೇಕು, ಹಿಂದೆ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದ್ದರೆ ತನಿಖೆ ನಡೆಸಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಲು ಅಧಿಕಾರಿಗಳು ನೂತನ ಪೌರಾಯುಕ್ತರಿಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ನಗರಸಭೆ ಸದಸ್ಯೆ ಕುಮುದಾ ಮಾತನಾಡಿ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಹಲವು ಕಡೆಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ಗಳು ಒಡೆದು ಹೋಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ದುರಸ್ತಿ ಮಾಡುವಂತೆ ಮನವಿ ಮಾಡಿದರೂ ವಾಟರ್ಮ್ಯಾನ್ ಸ್ಪಂದಿಸುತ್ತಿಲ್ಲ. ಹಿರಿಯ ಅಧಿಕಾರಿಗಳಿಗೆ ದೂರು ನೀಡಲು ಕರೆ ಮಾಡಿದರೆ ಸಂಪರ್ಕಕ್ಕೆ ಸಿಗುತ್ತಿಲ್ಲ, ನಾಗರಿಕರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹೌಸಿಂಗ್ ಬೋರ್ಡ್ ವಾಟರ್ಮನ್ ವೇತನ ತಡೆ ಹಿಡಿಯಲಾಗಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಪೌರಾಯುಕ್ತರು ಭರವಸೆ ನೀಡಿದರು.

24ನೇ ವಾರ್ಡ್ ಸದಸ್ಯೆ ಭಾಗ್ಯ ಮಾತನಾಡಿ, ಚೆನ್ನಾಪುರದ ಮೊಳೆಯಲ್ಲಿ ಎರಡು ರಸ್ತೆಗಳಿಗೆ ಕಾಂಕ್ರಿಟ್ ಹಾಗೂ ಒಳಚರಂಡಿ ನಿರ್ಮಾಣ ಮಾಡಲು ಟೆಂಡರ್ ಕರೆದು 9 ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಗುತ್ತಿಗೆದಾರನನ್ನು ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ವಾರ್ಡ್ನಲ್ಲಿ ಕಸ ಸಂಗ್ರಹ ಕಾರ್ಯವೂ ಸರಿಯಾಗಿ ನಡೆಯುತ್ತಿಲ್ಲ, ಒಂದು ತಿಂಗಳಿನಿಂದ ಕಸ ಸಂಗ್ರಹ ವಾಹನ ಬಾರದೆ ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹರಡಿದ್ದು ದುರ್ವಾಸನೆ ಬಿರುತ್ತಿದೆ. ಸ್ಥಳೀಯ ನಿವಾಸಿಗಳ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಶಾಖೆಯ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಆರೋಗ್ಯ ಶಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ ಕಸ ಸಂಗ್ರಹ ವಾಹನಗಳಿಗೆ ಚಾಲಕರ ಕೊರತೆ ಇದ್ದಿದ್ದರಿಂದ ಸಮಸ್ಯೆಯಾಗಿತ್ತು. ಎರಡು ವಾರ್ಡ್ಗಳಿಗೆ ಒಂದು ವಾಹನವನ್ನು ನಿಯೋಜಿಸಿ ಕಸ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಸ ಸಂಗ್ರಹಿಸುವ ವಾಹನಗಳ ಮೈಕ್ ಚಾಲೂ ಮಾಡದೆ ವಾಹನಗಳು ಬಂದು ಹೋಗುವುದೇ ನಾಗರಿಕರಿಗೆ ತಿಳಿಯುತ್ತಿಲ್ಲ, ಕಸ ಸಂಗ್ರಹಿಸುವ ಸಿಬ್ಬಂದಿಗೆ ಮೈಕ್ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಸಭೆಯಲ್ಲಿ ಹಲವು ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ನಗರಸಭೆ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯಂ ಸೇರಿದಂತೆ ಹಲವರು ಇದ್ದರು.

‘ಕೆಲಸ ಮಾಡದಿದ್ದರೂ ವೇತನ ಬಿಡುಗಡೆ’

ನಗರಸಭೆಯಲ್ಲಿ ಕೆಲಸ ಮಾಡದವರ ಹೆಸರಿನಲ್ಲಿ ವೇತನ ಬಿಡುಗಡೆ ಮಾಡಲಾಗುತ್ತಿದೆ. ನಿಯಮಬಾಹಿರವಾಗಿ ಅನರ್ಹರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದ್ದು ಕರ್ತವ್ಯಕ್ಕೆ ಹಾಜರಾಗದಿದ್ದರೂ ಸಂಬಳ ಕೊಡಲಾಗುತ್ತಿದೆ. ನಾಮಕಾವಸ್ತೆಗೆ ವಾಟರ್ಮನ್ಗಳನ್ನು ನೇಮಕ ಮಾಡಲಾಗಿದ್ದು ಕೆಲವು ವಾರ್ಡ್ಗಳಲ್ಲಿ ನಗರಸಭೆ ಸದಸ್ಯರು ವಾಟರ್ಮನ್ಗಳ ಮುಖವನ್ನೇ ನೋಡಿಲ್ಲ ಎಂದು ಸದಸ್ಯರಾದ ಬಸವಣ್ಣ ಹಾಗೂ ಖಲೀಲ್ವುಲ್ಲ ಆರೋಪ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.