ಚಾಮರಾಜನಗರ: ಪರಿಶಿಷ್ಟ ಜಾತಿ, ವರ್ಗಗಳ ವಿದ್ಯಾರ್ಥಿಗಳ ಮೇಲೆ ಜಾತಿ ಆಧಾರಿತ ದೌರ್ಜನ್ಯ ಹಾಗೂ ತಾರತಮ್ಯಗಳ ತಡೆಗೆ ಹಾಗೂ ದೂರುಗಳ ಪರಿಶೀಲನೆಗೆ ಸಮಾನತಾ ಸಮಿತಿಗಳನ್ನು ರಚಿಸುವ ಯುಜಿಸಿ ನಿರ್ಧಾರ ಸರಿಯಾಗಿದ್ದು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾ, ಅಹಿಂದ ಸಂಘಟನೆಗಳ ಒಕ್ಕೂಟ, ಕಾನ್ಶಿರಾಂ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗ ಜಮಾಹಿಸಿದ ಪ್ರತಿಭಟನಾನಿರತರು ಮೆರವಣಿಗೆ ಹೊರಟು ಜೋಡಿರಸ್ತೆಯ ಮೂಲಕ
ಜಿಲ್ಲಾಡಳಿತ ಭವನ ತಲುಪಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾ ಅಧ್ಯಕ್ಷ ಉಮೇಶ್ ಕುದರ್, ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮೇಲೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿಯ ಹೆಸರಿನಲ್ಲಿ ದೌರ್ಜನ್ಯ ತಾರತಮ್ಯ ನಡೆಯುತ್ತಿದ್ದು ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಯುಜಿಸಿ ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತಾ ಸಮಿತಿಗಳನ್ನು ರಚಿಸಲು ಮುಂದಾಗಿತ್ತು. ಆದರೆ ಸುಪ್ರೀಂಕೋರ್ಟ್ ಸಮಿತಿ ರಚನೆಗೆ ತಡೆಯಾಜ್ಞೆ ನೀಡಿರುವುದು ಬೇಸರ ತಂದಿದ್ದು ಕೂಡಲೇ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಜಾತಿ ತಾರತಮ್ಯ ಮತ್ತು ಕಿರುಕುಳಕ್ಕೆ ಈಗಾಗಲೇ ನೂರಾರು ತಳವರ್ಗದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ರೋಹಿತ ವೇಮುಲ, ವೈದ್ಯಕೀಯ ವಿದ್ಯಾರ್ಥಿನಿ ಪಾಯಲ್ ತದ್ವಿ, ಬಾಂಬೆ ಐಐಟಿ ವಿದ್ಯಾರ್ಥಿ ದರ್ಶನ ಸೋಲಂಕಿ ಸೇರಿದಂತೆ ಹಲವರು ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ ಎಂದರು.

ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ತಡೆಗೆ ಸಮಿತಿ ರಚನೆ ಅಗತ್ಯವಾಗಿದೆ, ಸಮಿತಿಗೆ ದೂರು ಪರಿಶೀಲಿಸುವ ಅಧಿಕಾರ ಇದೆಯೇ ಹೊರತು ಶಿಕ್ಷೆ ನಿಡುವ ಪ್ರಾಧಿಕಾರವಲ್ಲ; ಆದರೂ ಮೇಲ್ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ, ಮುಖಂಡರಾದ ಮಂಜುನಾಥ ಪ್ರಸನ್ನ, ರಾಜಶೇಖರ, ಗಣೇಶ ಪ್ರಸಾದ್, ಎಂ.ಶಿವಮೂರ್ತಿ, ಶಿವರಾಜ್ ಸಿದ್ದಯ್ಯನಪುರ, ಪರ್ವತರಾಜು, ಎಸ್.ಪಿ.ಮಹೇಶ್, ಕುಮಾರ್, ಕಾಗಲವಾಡಿ ಶಿವಸ್ವಾಮಿ, ದೊಡ್ಡರಾಯಪೇಟೆ ಸಿದ್ದರಾಜು, ರೂಪೇಶ್, ಗೋವಿಂದ, ವಾಸು, ಮಹೇಶ್, ಚನ್ನಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.