ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲ: ಅಸಮಾಧಾನ
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದರೂ ನಗರಸಭೆ ಪೌರಾಯುಕ್ತರು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಹಾಗೂ ಸಂಸದ ಸುನೀಲ್ ಬೋಸ್ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಕೊಳವೆಬಾವಿಯ ಸೌಲಭ್ಯ ಇಲ್ಲದವರು ಮನೆಗಳನ್ನು ತೊರೆಯುವ ಪರಿಸ್ಥಿತಿಗೆ ಬಂದಿದ್ದಾರೆ. ಕನಿಷ್ಠ ವಾರಕ್ಕೊಮ್ಮೆ ನೀರು ಕೊಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಾಧ್ಯವಾಗದಿರುವುದು ನೋವಿನ ಸಂಗತಿ ಎಂದು ಹೋರಾಟಗಾರ ಭಾನುಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.