ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಲ್‌: ಜೂನ್‌ 14ರಂದು ಚುನಾವಣೆ

Last Updated 14 ಏಪ್ರಿಲ್ 2022, 5:53 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲೂಕಿನ ಸಂತೇಮರಹಳ್ಳಿ ಹೋಬಳಿಯ ಕುದೇರಿನಲ್ಲಿರುವ ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಚಾಮುಲ್‌) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಜೂನ್‌ 14ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಮತ್ತು ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.

ಕರಡು ಮತ್ತು ಅಂತಿಮ ಅರ್ಹ ಮತ್ತು ಅನರ್ಹ ಮತದಾರರ ಪಟ್ಟಿ ಪ್ರಕಟಣೆ ಕುರಿತೂ ಅಧಿಸೂಚನೆ ಹೊರಡಿಸಲಾಗಿದೆ.

ಚುನಾವಣೆಯನ್ನು ನಡೆಸಲು ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗ (ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ)ಯ ಉಪನಿರ್ದೇಶಕರಾಜೇಂದ್ರ ಪ್ರಸಾದ್‌ ಅವರನ್ನು ರಿಟರ್ನಿಂಗ್ ಅಧಿಕಾರಿಯನ್ನಾಗಿ ಹಾಗೂ ಚಾಮರಾಜನಗರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಕಿರಣ್ ಕುಮಾರ್‌ ಅವರನ್ನು ಸಹಾಯಕ ರಿಟರ್ನಿಂಗ್ ಅಧಿಕಾರಿಯನ್ನಾಗಿ ಸಹಕಾರ ಚುನಾವಣಾ ಪ್ರಾಧಿಕಾರವು ನೇಮಕ ಮಾಡಿ ಆದೇಶಿಸಿದೆ.

ವೇಳಾಪಟ್ಟಿ:ನಾಮಪತ್ರಗಳನ್ನು ಮೇ 30ರಿಂದ ಜೂನ್‌ 6ರವರೆಗೆ ಸಲ್ಲಿಸಬಹುದು. ಜೂನ್‌ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾ‍ಪಸ್‌ಗೆ 8ರಂದು ಕೊನೆಯ ದಿನ. 14ರಂದು ಮತದಾನ ನಡೆಯಲಿದೆ.

19ರಂದು ಕರಡು ಮತದಾನ ಪಟ್ಟಿ:ಕರಡು ಅರ್ಹ ಮತ್ತು ಅನರ್ಹ ಮತದಾರರ ಪಟ್ಟಿ ಇದೇ 19ರಂದು ಒಕ್ಕೂಟದ ಕೇಂದ್ರ ಕಚೇರಿ ಹಾಗೂ ಅಧೀನ ಶಾಖಾ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಸಹಕಾರ ಸಂಘಗಳ ಉಪನಿಬಂಧಕರ ಕಛೇರಿ, ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗ (ಕೈಗಾರಿಕೆ ಮತ್ತು ವಾಣಿಜ್ಯ) ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇದೇ 19ರಿಂದ ಮೇ 20ರವರೆಗೆ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಅಥವಾ ಜಿಲ್ಲಾ ನೋಡೆಲ್ ಅಧಿಕಾರಿ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಲಿಖಿತವಾಗಿ, ದಾಖಲೆಗಳ ಸಮೇತ ಸಲ್ಲಿಸಬಹುದು. ಮೇ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT