ಬುಧವಾರ, ಏಪ್ರಿಲ್ 8, 2020
19 °C
ವಾರದೊಳಗೆ ವರದಿ ನೀಡಲು ಸೂಚನೆ

ಚಾಮುಲ್ ನೇಮಕಾತಿ ಪ್ರಕರಣ: ಜಂಟಿ ತನಿಖೆಗೆ ಡಿಸಿ ಆದೇಶ ತಂಡ ರಚನೆ

ಸೂರ್ಯನಾರಾಯಣ ವಿ. Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಕುದೇರಿನ ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ಚಾಮುಲ್) ಇದ್ದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತ ತನಿಖೆಗೆ ನಾಲ್ವರು ಅಧಿಕಾರಿಗಳ ತಂಡವನ್ನು ರಚಿಸಿ ಜಂಟಿ ತನಿಖೆ ನಡೆಸಿ, ವಾರದೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶಿಸಿದ್ದಾರೆ.

72 ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆಸಿ ಅನರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹಲವು ಸಂಘ-ಸಂಸ್ಥೆಗಳು ಜಿಲ್ಲಾಡಳಿತಕ್ಕೆ ದೂರು ನೀಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದವು.

ನೇಮಕಾತಿ ಪ್ರಕ್ರಿಯೆಯ ವಿವಿಧ ಅಂಶಗಳ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕಿರುವುದರಿಂದ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಸಮಾಜ ಕಲ್ಯಾಣ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರನ್ನು ಜಂಟಿ ತನಿಖೆಗೆ ನೇಮಕ ಮಾಡಲಾಗಿದೆ.

ಉದ್ಯೋಗ ನೇಮಕಾತಿ ಸಂಬಂಧ ನಡೆಸಲಾಗಿರುವ ಲಿಖಿತ ಪರೀಕ್ಷೆ, ಸಂದರ್ಶನ, ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಕೆ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿರುವ ಕುರಿತು ಜಂಟಿ ತನಿಖೆ ನಡೆಯಲಿದೆ.

ಈ ಮಧ್ಯೆ, ಅಕ್ರಮ ನೇಮಕಾತಿಯನ್ನು ಖಂಡಿಸಿ ಸಂತೇಮರಹಳ್ಳಿ ಹೋಬಳಿಯಲ್ಲಿ ಸೋಮವಾರ ಸ್ವಯಂ ಪ್ರೇರಿತ ಬಂದ್ ಕರೆಯಲಾಗಿದೆ.


ಜಿಲ್ಲಾಧಿಕಾರಿ ಆದೇಶದ ಪ್ರತಿ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು