ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಳಂದೂರು: ಬೋನಿಗೆ ಬಿದ್ದ ಚಿರತೆ, ಗ್ರಾಮಸ್ಥರ ನಿಟ್ಟುಸಿರು

Published 2 ಆಗಸ್ಟ್ 2023, 8:26 IST
Last Updated 2 ಆಗಸ್ಟ್ 2023, 8:26 IST
ಅಕ್ಷರ ಗಾತ್ರ

ಯಳಂದೂರು (ಚಾಮರಾಜನಗರ ಜಿಲ್ಲೆ): ಯಳಂದೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉಪಟಳ ನೀಡಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗುಡ್ಡದ ಬಳಿ ಮಂಗಳವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಯಳಂದೂರು ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಬಾಲಕನೊಬ್ಬನ ಮೇಲೆ ದಾಳಿ ಮಾಡಿದ್ದ ಚಿರತೆ ಸುತ್ತಮುತ್ತ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿತ್ತು. 12 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆಗೆ ಕಾರ್ಯಾಚರಣೆ ಕೈಗೊಂಡಿದ್ದರು.

ಅರಣ್ಯ ರಕ್ಷಕರು ವಿವಿಧಡೆ ಬೋನುಗಳನ್ನು ಇಟ್ಟು ಕಾಯುತ್ತಿದ್ದರು. ಕೆಲವೆಡೆ ಸೆರೆಗೆ ಅನುಕೂಲವಾಗುವಂತೆ ನಾಯಿ, ಆಡು ಹಾಗೂ ಜಾನುವಾರುಗಳನ್ನು ಬಿಟ್ಟು ವೀಕ್ಷಿಸುತ್ತಿದ್ದರು. ಕೆಲವೆಡೆ ಕಣ್ಣಿಗಾಗಲು ಕ್ಯಾಮೆರಾಗಳ ಮೇಲೆ ನಿಗಾ ಇಟ್ಟಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT