ಕೊಳ್ಳೇಗಾಲ: 15 ವರ್ಷದ ಬಾಲಕಿಯನ್ನು ಮದುವೆಯಾಗಿ ಆಕೆ ಗರ್ಭಿಣಿಯಾಗಲು ಕಾರಣವಾದ ವ್ಯಕ್ತಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಎಂಟು ತಿಂಗಳ ಹಿಂದೆ ಬಾಲಕಿಯನ್ನು ಮನೆಯವರ ಸಮ್ಮುಖದಲ್ಲೇ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದಳು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಅನುಮಾನಗೊಂಡು ವಿಚಾರಣೆ ಮಾಡಿದಾಗ, ಆಕೆಯ ವಯಸ್ಸು 15 ವರ್ಷ ಎಂದು ಗೊತ್ತಾಗಿದೆ.
ನಂತರ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಬಾಲಕಿಯನ್ನು ವಿಚಾರಣೆ ನಡೆಸಿ ಆಕೆಯನ್ನು ಮದುವೆಯಾದ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಬಾಲಕಿಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.