ಮಂಗಳವಾರ, ಸೆಪ್ಟೆಂಬರ್ 21, 2021
26 °C

ಗುಂಡ್ಲುಪೇಟೆ: 16ರ ಬಾಲಕಿಯೊಂದಿಗೆ ಯುವಕನ ಮದುವೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ತಾಲ್ಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯನ್ನು 24 ವರ್ಷದ ಯುವಕನ ಜೊತೆ ವಿವಾಹ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಬಾಲ್ಯವಿವಾಹದ ಬಗ್ಗೆ ಖಚಿತ ಮಾಹಿತಿ ಪಡೆದ ಸ್ವಯಂ ಸೇವಾ ಸಂಸ್ಥೆ ಒಡಿಪಿ ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಪೋಷಕರು ಮದುವೆ ಆಗಿಲ್ಲವೆಂದು ವಾದಿಸಿ ಕಳುಹಿಸಿದ್ದಾರೆ. ಅವರ ವಿರುದ್ಧ ಪಾಲಕರು ಹರಿಹಾಯ್ದಿರುವ ವಿಡಿಯೊ ಕೂಡ ಮಾಧ್ಯಮಗಳಿಗೆ ಸಿಕ್ಕಿದೆ. ಬಾಲ್ಯವಿವಾಹದ ಬಗ್ಗೆ ಮಾಹಿತಿ ಇದ್ದರೂ ಸಿಡಿಪಿಒ, ಸೂಪರ್ ವೈಸರ್, ಪಿಡಿಒ ಸ್ಥಳಕ್ಕೆ ಹೋಗಿಲ್ಲ ಎಂದು ತಿಳಿದುಬಂದಿದೆ. 

‘ಮದುವೆಯಾದ ಬಾಲಕಿಯನ್ನು ಸದ್ಯ ಹುಡುಗನ ಮನೆಯಲ್ಲೇ ಬಚ್ಚಿಟ್ಟಿದ್ದಾರೆ. ಹುಡುಗನ ತಂಗಿಗೆ ಸೀರೆ ಉಡಿಸುವ ಶಾಸ್ತ್ರ ಮಾಡಿಸಲಾಗುತ್ತಿದೆ ಎಂದು ವಾದಿಸುತ್ತಿದ್ದಾರೆ. ಗ್ರಾಮಸ್ಥರು ಮದುವೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಮದುವೆ ನಡೆದಿರುವುದು ನಿಜವೇ ಆಗಿದ್ದರೆ, ಪೊಲೀಸರ ರಕ್ಷಣೆ ಪಡೆದು ಬಾಲಕಿಯನ್ನು ರಕ್ಷಿಸಲಾಗುವುದು’ ಎಂದು ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು