ಕೊಳ್ಳೇಗಾಲ: ‘ಮಹಿಳೆಯರು ಹಾಗೂ ಮಕ್ಕಳು ಭಿಕ್ಷಾಟನೆ ಮಾಡುವುದು ತಪ್ಪು; ಸಾರ್ವಜನಿಕರು ಭಿಕ್ಷೆ ನೀಡುವುದೂ ತಪ್ಪು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗದ ಸದಸ್ಯ ವೆಂಕಟೇಶ್ ಹೇಳಿದರು.

ನಗರದಲ್ಲಿ ಗುರುವಾರ ಮಹಿಳೆ ಮತ್ತು ಮಕ್ಕಳ ಭಿಕ್ಷಾಟನೆ, ಬಾಲ್ಯ ವಿವಾಹ ತಡೆ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಅಪರಿಚಿತರು ಭಿಕ್ಷೆ ಬೇಡುವುದು ಹೆಚ್ಚಾಗಿದೆ. ಇಂತಹ ಚಟುವಟಿಕೆಗಳಿಗೆ ಯಾರೂ ಅವಕಾಶ ನೀಡಬಾರದು. ಯಾರಾದರೂ ಭಿಕ್ಷಾಟನೆ ಮಾಡಿದರೆ ಅಲ್ಲಿನ ಅಧಿಕಾರಿಗಳೇ ಹೊಣೆ ಆಗುತ್ತೀರಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿ, ಇಲ್ಲದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದರು.

‘ಬಾಲ್ಯ ವಿವಾಹವು ಚಾಮರಾಜನಗರ ಜಿಲ್ಲೆಯಲ್ಲಿ ಅತೀ ಹೆಚ್ಚು ನಡೆಯುತ್ತಿದೆ. ಇ ಜಾಗೃತಿನಡೆಸಿದರೂ ಸದ್ದಿಲ್ಲದೆ ನಡೆಯುತ್ತಿದೆ. ಬಾಲ್ಯವಿವಾಹದ ಮಾಡುವವರ ವಿರುದ್ಧ ಕಾನೂನು ಕ್ರಮದ ಬಗ್ಗೆ ದೊಡ್ಡ ಗಾತ್ರದ ಫ್ಲೆಕ್ಸ್ಗಳನ್ನು ಆಸ್ಪತ್ರೆ, ಬಸ್ ನಿಲ್ದಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಅಧಿಕಾರಿಗಳು ಅಳವಡಿಸಿ ಜನ ಜಾಗೃತಿ ಮೂಡಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಇಒ ಗುರು ಶಾಂತಪ್ಪ ಬೆಳ್ಳುಂಡಗಿ, ಪೌರಾಯುಕ್ತ ಎ.ರಮೇಶ್, ಬಿಇಒ ಮಂಜುಳಾ, ಪರಿಸರ ವಿಭಾಗದ ಎಂಜಿನಿಯರ್ ಪ್ರಸನ್ನ, ಆರೋಗ್ಯ ಹಿರಿಯ ನಿರೀಕ್ಷಕ ಚೇತನ್, ಬಾಲ ನ್ಯಾಯಮಂಡಳಿ ಸದಸ್ಯ ಗಂಗಾಧರ ಸ್ವಾಮಿ, ಮಕ್ಕಳ ರಕ್ಷಣೆ ಘಟಕದ ಕುಮಾರ, ಮಕ್ಕಳ ಸಹಾಯವಾಣಿ ಸಂಯೋಜಕ ಸಿದ್ದರಾಜು, ಸಿದ್ದಶೆಟ್ಟಿ ಸಭೆಯಲ್ಲಿ ಭಾಗವಹಿಸಿದ್ದರು.

ಭಿಕ್ಷಾಟನೆಗೆ ಮತ್ತು ಬಾಲ್ಯವಿವಾಹದ ಬಗ್ಗೆ ನಗರಸಭೆಯಿಂದ ಜಾಗೃತಿ ಮೂಡಿಸಿ ಎಚ್ಚರ ವಹಿಸಲಾಗುತ್ತಿದೆ. -ರೇಖಾ ನಗರಸಭೆ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.