ಚಾಮರಾಜನಗರ: ‘ಸಾರ್ವಜನಿಕರ ಸಹಕಾರದೊಂದಿಗೆ ಮಾತ್ರ ಬಾಲ್ಯವಿವಾಹ ತಡೆಯಲು ಸಾಧ್ಯವಿದ್ದು ಪ್ರತಿಯೊಬ್ಬರೂ ಸಮಾಜದ ಅನಿಷ್ಠ ಪದ್ಧತಿ ನಿರ್ಮೂಲನೆಗೆ ಮನಃಪೂರ್ವಕವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಕರೆ ನೀಡಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಆಯೋಜಿಸಿದ್ದ ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಸಂವಿಧಾನ ಮಕ್ಕಳಿಗೂ ಹಕ್ಕುಗಳನ್ನು ಕೊಟ್ಟಿದ್ದು ಅವುಗಳನ್ನು ರಕ್ಷಣೆ ಮಾಡಬೇಕಾಗಿರುವುದು ಸಮಾಜದ ಕರ್ತವ್ಯ. ಕಠಿಣ ಕಾನೂನುಗಳಿದ್ದರೂ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಅತಂಕಕಾರಿ ಬೆಳವಣಿಗೆಯಾಗಿದ್ದು, ತಡೆಗಟ್ಟಲು ತಳಮಟ್ಟದಿಂದ ಪರಿಣಾಮಕಾರಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ’ ಎಂದರು.

‘ಕೆಲವು ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುತ್ತಿದ್ದು ಹೆರಿಗೆಗಾಗಿ ಆಸ್ಪತ್ರೆ ಬಂದಾಗಲಷ್ಟೆ 18 ವರ್ಷ ತುಂಬದಿರುವುದು ಕಂಡುಬರುತ್ತಿದೆ. ಅರ್ಧಕ್ಕೆ ಶಾಲೆ ಬಿಡಿಸುತ್ತಿರುವುದರಿಂದ ಹೆಣ್ಣು ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ. ಚಿಕ್ಕವಯಸ್ಸಿನಲ್ಲೇ ಬಾಲಕಿಯರು ಗರ್ಭಿಣಿಯಾಗಿ ರಕ್ತಹೀನತೆ, ಕಡಿಮೆ ತೂಕದ ಮಗುವಿನ ಜನನ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದರು.

‘ಬಾಲ್ಯವಿವಾಹ ಸಂಪೂರ್ಣ ತಡೆಗಟ್ಟಲು ಜಿಲ್ಲಾಡಳಿತ ವಿವಿಧ ಇಲಾಖೆಗಳೊಂದಿಗೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಜಿಲ್ಲೆಯಲ್ಲಿ 97 ಬಾಲ್ಯವಿವಾಹ ಪ್ರಕರಣಗಳನ್ನು ತಡೆದಿರುವುದು ಗಮನಾರ್ಹ ಸಂಗತಿ’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಜಿಲ್ಲೆಯಲ್ಲಿ ಒಂದೂ ಬಾಲ್ಯವಿವಾಹ ನಡೆಯಲು ಅವಕಾಶ ನೀಡದೆ ನ.14ರೊಳಗೆ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಗಂಭೀರವಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ವಾಸ್ತವ ಸ್ಥಿತಿಯ ಬಗ್ಗೆ ಅರಿವಿರುವ ಅಧಿಕಾರಿಗಳು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಶ್ರಮಿಸಬೇಕು. ಜಿಲ್ಲಾಡಳಿತ, ಮಕ್ಕಳ ಸಹಾಯವಾಣಿ, ಕಂಟ್ರೋಲ್ ರೂಂಗೆ ಮಾಹಿತಿ ನೀಡಬೇಕು. ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ದೃಢಸಂಕಲ್ಪ ಮಾಡಬೇಕು’ ಎಂದು ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ‘ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳನ್ನು ಜಾರಿಗೊಳಿಸಿ 35 ವರ್ಷಗಳಾಗಿದ್ದು, ಸುಸ್ಥಿರ ಅಭಿವೃದ್ಧಿಯ ಮಾನದಂಡಗಳನ್ನು 2035ರೊಳಗೆ ತಲುಪಬೇಕಾಗಿದೆ. ಬಾಲ್ಯವಿವಾಹ ತಡೆಗೆ ಹಲವು ಯೋಜನೆ, ಕಾರ್ಯಕ್ರಮ, ಕಾನೂನುಗಳಿದ್ದರೂ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಬಾಲ್ಯವಿವಾಹ ತಡೆಗೆ ರಾಜ್ಯದಲ್ಲಿಯೇ ಮಾದರಿಯಾಗಿ ಜಿಲ್ಲಾಡಳಿತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ 130 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಎಲ್ಲ ಶಾಲೆಗಳಲ್ಲಿ ಮಕ್ಕಳು ಸಮಸ್ಯೆ ಹೇಳಿಕೊಳ್ಳಲು ಪೊಲೀಸ್ ಇಲಾಖೆ ಆಪ್ತಗೆಳತಿ ಪೆಟ್ಟಿಗೆಗಳನ್ನಿಟ್ಟು ಸಹಕಾರ ನೀಡುತ್ತಿದೆ’ ಎಂದರು.

‘ಬಾಲ್ಯವಿವಾಹ ತಡೆ ಸಾಕ್ಷರತಾ ಆಂದೋಲನದ ಮಾದರಿಯಲ್ಲಿ ನಡೆಯಬೇಕು, ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ನ.14ರಂದು ಗೌರವಿಸಲಾಗುವುದು’ ಎಂದು ವೆಂಕಟೇಶ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್ಪಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಎಎಸ್ಪಿ ಶಶಿಧರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಹೆಚ್.ಆರ್. ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ.ರಮೇಶ, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯರಾದ ಗಂಗಾಧರ್, ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕಾರ:

ಬಾಲ್ಯವಿವಾಹ ಮುಕ್ತ ಚಾಮರಾಜನಗರ ಜಿಲ್ಲೆ ಅಭಿಯಾನದ ‘ಪ್ರತಿಜ್ಞಾವಿಧಿ ಸ್ವೀಕಾರ’ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಕಚೇರಿಗಳ ಮುಂಭಾಗ ಶಾಲಾ ಕಾಲೇಜು ಪೊಲೀಸ್ ಠಾಣೆ ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಿತು. ನಗರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಬಾಲ್ಯವಿವಾಹ ಪದ್ದತಿ ತಡೆ ಕುರಿತ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.