ಚಾಮರಾಜನಗರ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪುನರ್ವಸತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮಕ್ಕಳ ರಕ್ಷಣೆ, ಪಾಲನೆ, ಪೋಷಣೆಗೆ ಇರುವ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ನಿಯಮನುಸಾರ ಜಾರಿಗೊಳಿಸಬೇಕು.

ಮಕ್ಕಳ ಹಕ್ಕುಗಳ ರಕ್ಷಣೆಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಒಂದು ದಿನ ಮಕ್ಕಳ ವಿಶೇಷ ಗ್ರಾಮಸಭೆ ನಡೆಸಬೇಕಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಕ್ಕಳ ಗ್ರಾಮಸಭೆ ಆಯೋಜಿಸುವಾಗ ವೇಳಾಪಟ್ಟಿ ಸಿದ್ದಪಡಿಸಬೇಕು. ಏಕಕಾಲದಲ್ಲಿ ಸಭೆ ಏರ್ಪಡಿಸಿದರೆ ಎಲ್ಲ ಅಧಿಕಾರಿಗಳು ಭಾಗವಹಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಪ್ರತ್ಯೇಕ ದಿನ ಸಭೆ ನಿಗದಿಪಡಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳುವಂತೆ ತಿಳಿಸಬೇಕು. ಸಭೆಯ ಜೊತೆ ಮಕ್ಕಳ ಆಟೋಟ ಸ್ಪರ್ಧೆಗಳನ್ನು ಸಹ ಏರ್ಪಡಿಸುವುದರಿಂದ ಮಕ್ಕಳಲ್ಲಿ ಗ್ರಾಮಸಭೆಗಳಲ್ಲಿ ಭಾಗವಹಿಸುವಿಕೆಯ ಬಗ್ಗೆ ಆಸಕ್ತಿ ಹೆಚ್ಚಾಗಲಿದೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ನಗರ ಪಟ್ಟಣಗಳ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ, ಬಾಲ್ಯವಿವಾಹ ತಡೆ, ಮಕ್ಕಳ ರಕ್ಷಣೆ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚಿಸಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲಾ ಕಾಲೇಜು, ವಸತಿ ನಿಲಯಗಳು, ಸರ್ಕಾರಿ, ಅರೆ ಸರ್ಕಾರಿ ಸೇವಾ ಸಂಸ್ಥೆಗಳ ಕಟ್ಟಡಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಫಲಕವನ್ನು ಕಡ್ಡಾಯವಾಗಿ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದರು.

ಸರ್ಕಾರಿ ಬಾಲಮಂದಿರಗಳಲ್ಲಿ ರಕ್ಷಣೆಗೆ ಒಳಪಟ್ಟ ಮಕ್ಕಳಿದ್ದು, ಅವರಿಗೆ ವಸತಿ ಶಾಲೆಗಳಲ್ಲಿ ದಾಖಲಾತಿ ಮಾಡಿಸಬೇಕು, ಶಿಕ್ಷಣ ಪಡೆದು ಸಾಧನೆ ಮಾಡಲು ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಶಾಲೆಗೆ ಬರುವ ಮಕ್ಕಳು ಮೂರು ದಿನಗಳ ಕಾಲ ಗೈರು ಹಾಜರಾದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಗೈರಾದ ವಿದ್ಯಾರ್ಥಿಯ ಮನೆಗೆ ಭೇಟಿನೀಡಿ ಪೋಷಕರೊಡನೆ ಸಮಾಲೋಚನೆ ನಡೆಸಿ ಗೈರಾಗಿದ್ದಕ್ಕೆ ಕಾರಣ ತಿಳಿದುಕೊಳ್ಳಬೇಕು. ಶಾಲೆ ಬಿಡಿಸಿರುವುದು ಕಂಡುಬಂದರೆ ಪೋಷಕರ ಮನವೊಲಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಮಾತನಾಡಿ ‘ಮಕ್ಕಳ ಹಕ್ಕು ರಕ್ಷಣೆಯಂತಹ ಕಾರ್ಯದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ದಾಖಲಾದ ಪ್ರಕರಣಗಳಲ್ಲಿ ವಿಳಂಬ ಮಾಡದೆ ಕಾರ್ಯನಿರ್ವಹಿಸಬೇಕು ಎಂದರು.

ಬಾಲ್ಯವಿವಾಹ ತಡೆ ಪ್ರಕರಣಗಳು, ಪೋಕ್ಸೋ ಪ್ರಕರಣಗಳು, ವಿಶೇಷ ಪಾಲನಾ ಯೋಜನೆಯಡಿ ಸೌಲಭ್ಯ ಒದಗಿಸಲಾಗುತ್ತಿರುವ ವಿವರಗಳು ಸೇರಿದಂತೆ ಮಕ್ಕಳ ರಕ್ಷಣೆ ಹಾಗೂ ಪೋಷಣೆಗೆ ಇರುವ ಸಮಗ್ರ ಕಾರ್ಯಕ್ರಮಗಳ ಪ್ರಗತಿಯನ್ನು ಜಿಲ್ಲಾಧಿಕಾರಿ ಸಭೆಯಲ್ಲಿ ವಿಸೃತವಾಗಿ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಡಿವೈಎಸ್ಪಿ ಧಮೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂಧ್ಯಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಜುಳಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಲತಾ, ಸದಸ್ಯರಾದ ಲೀನಾ ಕುಮಾರಿ, ಗಾಯಿತ್ರಿ, ಅರುಣ್ ಕುಮಾರ್, ಬಾಲನ್ಯಾಯ ಮಂಡಳಿ ಸದಸ್ಯರಾದ ಸರಸ್ವತಿ, ಗಂಗಾಧರ್ ಸ್ವಾಮಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಅಧಿಕಾರಿ ಪ್ರಸನ್ನ ಮೂರ್ತಿ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.