ಚಾಮರಾಜನಗರ: ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಸಪ್ತಾಹದ ಅಂಗವಾಗಿ ಒಡಿಪಿ ಮಕ್ಕಳ ಸಹಾಯವಾಣಿ –1098ಯಿಂದ ಶನಿವಾರನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರು ಜಿಲ್ಲಾಡಳಿತ ಭವನದ ಮುಂಭಾಗ ರ್ಯಾಲಿಗೆ ಹಸಿರು ನಿಶಾನೆ ತೋರಿದರು.

ಜಿಲ್ಲಾಡಳಿತ ಭವನದಿಂದ ಹೊರಟ ಬೈಕ್ ರ್ಯಾಲಿಯು ಬಿ.ರಾಚಯ್ಯ ಜೋಡಿ ರಸ್ತೆ, ಭುವನೃಶ್ವರಿ ವೃತ್ತ, ಶ್ರೀಚಾಮರಾಜೇಶ್ವರ ದೇವಸ್ಥಾನದ ಮೂಲಕ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದ ಮೂಲಕ ವಾಪಸ್ ಜಿಲ್ಲಾಡಳಿತ ಭವನದಲ್ಲಿ ಕೊನೆಗೊಂಡಿತು.

ನ.14ರಿಂದ 21ರವರೆಗೆ ಮಕ್ಕಳ ಸಪ್ತಾಹ ಪ್ರಯುಕ್ತ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮಕ್ಕಳ ರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.

ಒಡಿಪಿ ಸಂಸ್ಥೆಯ ನಿರ್ದೇಶಕ ಫಾದರ್ ಸಿಕ್ವೇರಾ, ಸಾಧನಾ ಸಂಸ್ಥೆಯ ಟಿ.ಜೆ.ಸುರೇಶ್, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಮಹೇಶ್, ಮಕ್ಕಳ ಸಹಾಯವಾಣಿ ಸಂಯೋಜಕಿ ಲತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿಜಯ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.