ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹನೂರು: ಸೂಳೇರಿಪಾಳ್ಯ ಗ್ರಾಮದಲ್ಲಿ‌ ಮಕ್ಕಳ ಗ್ರಾಮಸಭೆ

Published 6 ಜನವರಿ 2024, 15:55 IST
Last Updated 6 ಜನವರಿ 2024, 15:55 IST
ಅಕ್ಷರ ಗಾತ್ರ

ಹನೂರು: ‘ಮಕ್ಕಳು ತಮಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಕ್ಕಳ ಗ್ರಾಮ ಸಭೆ ತುಂಬಾ ಅನುಕೂಲವಾಗಲಿದೆ’ ಎಂದು ಸೂಳೇರಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತುರಾಜು ಹೇಳಿದರು.

ಗ್ರಾಮ ಪಂಚಾಯಿತಿ ಹಾಗೂ ಹೋಲಿಕ್ರಾಸ್ ಸಂಸ್ಥೆ ಸಹಯೋಗದಲ್ಲಿ ನಡೆದ ಮಕ್ಕಳ ಗ್ರಾಮ ಸಭೆ ಉದ್ಘಾಟನೆ ಮಾಡಿ ಮಾತನಾಡಿದರು.

‘ಮಕ್ಕಳು ಇಂದಿನ ಪ್ರಜೆಗಳು ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ ಈ ವಯಸ್ಸಿನಲ್ಲೇ ಹೆಚ್ಚು ಅವಕಾಶ ಕೊಡಬೇಕು. ಜೊತೆಗೆ ತಾವು ಈಗಾಗಲೇ ಹೇಳಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಕ್ರಮ ವಹಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ವಿವಿಧ ಶಾಲೆಗಳಿಂದ ಬಂದಿದ್ದ ಮಕ್ಕಳು ತಮ್ಮ ಶಾಲೆ ಹಾಗೂ ಗ್ರಾಮಕ್ಕೆ ಸಂಬಂಧ ಪಟ್ಟಂತೆ ಶೌಚಾಲಯ, ಕಟ್ಟಡ ದುರಸ್ಥಿ ಚುರ್ಕಿ, ಆಟದ ಮೈದಾನ, ವಿದ್ಯುತ್ ವ್ಯವಸ್ಥೆ ಸೇರಿ ಇನ್ನಿತರ ಸಮಸ್ಯೆಗಳನ್ನು ತೆರೆದಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯದರ್ಶಿ ಪವನ್ ಕುಮಾರ್ ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಗೆಹರಿಸಲು ಆಗುವುದನ್ನು ಮಾಡಿ, ಆಗದೇ ಇರುವುದನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಗಮನಕ್ಕೆ ತರಲಾಗುವುದು’ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತುರಾಜು, ಸದಸ್ಯ ಚೆನ್ನೆ ಗೌಡ, ಕಾರ್ಯದರ್ಶಿ ಪವನ್ ಕುಮಾರ್, ಮುಖ್ಯ ಶಿಕ್ಷಕರಾದ ವೀರಪ್ಪ, ಮಹಾದೇವ, ಶಿಕ್ಷಕರಾದ ರಾಯಪ್ಪನ್, ರೂಹುಲ್ಲ, ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿಗಳಾದ ಬಸವರಾಜು, ಸುರೇಶ್, ದಾನಪ್ಪ, ಕಾಂತು, ಶಾಂಭವಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಅಂಬಿಕಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT