ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಸ್‌ಮಸ್ ಶಾಂತಿ ಸಭೆ

Published 19 ಡಿಸೆಂಬರ್ 2023, 14:31 IST
Last Updated 19 ಡಿಸೆಂಬರ್ 2023, 14:31 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಕಸ್ತೂರು ಗ್ರಾಮದ ಚರ್ಚ್ ಆವರಣದಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ವಿವಿಧ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ಮಂಗಳವಾರ ನಡೆಯಿತು.

ಕುದೇರು ಪಿಎಸ್‌ಐ ತಾಜುದ್ದೀನ್ ಮಾತನಾಡಿ, ‘ಡಿ.25 ರಂದು ನಡೆಯುವ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತ ಸಮುದಾಯದವರು ಗ್ರಾಮದಲ್ಲಿ ಶಾಂತಿ, ಸೌರ್ಹಾದತೆಯಿಂದ ಆಚರಿಸಬೇಕು. ಗ್ರಾಮಗಳಲ್ಲಿ ಹಬ್ಬಗಳು ನಡೆಯುವಾಗ ಶಾಂತಿ ಭಂಗವಾಗದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು. ಗ್ರಾಮದಲ್ಲಿ ಹಬ್ಬದಂದು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು, ಜೂಜಾಟ ಆಡುವವರು ಹಾಗೂ ಯಾರೇ ಅಪರಿಚಿತ ವ್ಯಕ್ತಿಗಳು ಕಂಡು ಬಂದರೇ ಕೂಡಲೇ 112ಗೆ ಕರೆಮಾಡಿ ಅಥವಾ ಠಾಣೆಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು. ಫಾದರ್ ಮೋಹನ್ ಸೇರಿ ಗ್ರಾಮದ ವಿವಿಧ ಸಮುದಾಯದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT