ಚಾಮರಾಜನಗರ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಡಳಿತಾತ್ಮಕ ಕಾರಣಗಳಿಗಾಗಿ ದೆಹಲಿಗೆ ಹೋಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಅವರು ದೆಹಲಿಗೆ ಹೋಗುವುದು, ಬೆಂಗಳೂರಿಗೆ ಬರುವುದು ಆಡಳಿತಾತ್ಮಕ ಸಂಪ್ರದಾಯದ ಅಂಗ. ಹಾಗಾಗಿ ದೆಹಲಿಗೆ ಹೋಗುತ್ತಾರೆ. ಮುಖಂಡರನ್ನು ಭೇಟಿ ಮಾಡುತ್ತಾರೆ. ರಾಜ್ಯದ ಅಭಿವೃದ್ಧಿ ವಿಷಯಗಳನ್ನು ಚರ್ಚಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ’ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಯಡಿಯೂರಪ್ಪ: ರಾಜ್ಯದ ಅಭಿವೃದ್ಧಿ ಈಡೇರಿಕೆಯ ಭರವಸೆ

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಯವರ ಅಧಿಕಾರ. ಅದನ್ನು ಅವರು ನಿರ್ವಹಿಸುತ್ತಾರೆ. ಪಕ್ಷದ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷರ ಜವಾಬ್ದಾರಿ. ಅದನ್ನು ಅವರು ನಿರ್ವಹಿಸುತ್ತಾರೆ. ಮುಜರಾಯಿ ಸಚಿವನಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವನಾಗಿ ಅತ್ಯಂತ ಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸುವುದು ನನ್ನ ಹೊಣೆ. ನಾನು ಅದನ್ನು ನಿಭಾಯಿಸುತ್ತಿದ್ದೇನೆ’ ಎಂದು ಉತ್ತರಿಸಿದರು.

ತಮಿಳುನಾಡಿನಲ್ಲಿ ದೇವಾಲಯಗಳಿಗೆ ದಲಿತ ಅರ್ಚಕರನ್ನು ನೇಮಕ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಅರ್ಚಕರ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮಲ್ಲಿರುವ ಪರಂಪರೆ ಹಾಗೂ ಇತಿಹಾಸ ಮುಂದುವರಿಯುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.