ಚಾಮರಾಜನಗರ: ಕೆಎಸ್‌ಆರ್‌ಟಿಸಿಯ ಏಳು ಚಾಲಕರಿಗೆ ಚಿನ್ನದ ಪದಕ

ಚಾಮರಾಜನಗರ: ಅಪಘಾತ ರಹಿತವಾಗಿ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿಯ ಚಾಮರಾಜನಗರ ವಿಭಾಗದ ಏಳು ಮಂದಿ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕಗಳನ್ನು ಬುಧವಾರ ಪ್ರದಾನ ಮಾಡಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ಏಳು ಮಂದಿಗೂ ಮುಖ್ಯಮಂತ್ರಿ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಿದರು.
ಚಾಮರಾಜನಗರ ಘಟಕದ ಬಸವರಾಜು, ಗುಂಡ್ಲುಪೇಟೆ ಘಟಕದ ನಂಜುಂಡಸ್ವಾಮಿ ಆರ್., ಸಿದ್ದರಾಜು ಆರ್, ಚಂದ್ರಶೇಖರ ಡಿ.ಜೆ., ಮಹದೇವನಾಯ್ಕ ಹಾಗೂ ಕೊಳ್ಳೇಗಾಲ ಘಟಕದ ವಿ.ಗೋವಿಂದಯ್ಯ, ಎಸ್.ರಾಚಯ್ಯ ಅವರು 2017 ಹಾಗೂ 2018ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭೆ ಅಧ್ಯಕ್ಷೆ ಸಿ.ಎಂ ಆಶಾ, ಉಪಾಧ್ಯಕ್ಷೆ ಪಿ.ಸುಧಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂತಿ೯, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಪಂ ಸಿಇಒ ಕೆ.ಎಂ ಗಾಯತ್ರಿ, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.