ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಐದು ವರ್ಷಗಳಲ್ಲಿ ಮಲೆ ಮಹದೇಶ್ವರ ಸಮಗ್ರ ಅಭಿವೃದ್ಧಿ’: ಸಿಎಂ ಬೊಮ್ಮಾಯಿ

Last Updated 23 ಸೆಪ್ಟೆಂಬರ್ 2021, 3:06 IST
ಅಕ್ಷರ ಗಾತ್ರ

ಬೆಂಗಳೂರು: ಮಲೆ ಮಹದೇಶ್ವರ ಕ್ಷೇತ್ರವನ್ನು ಮುಂದಿನ ಐದು ವರ್ಷಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ನಡೆದ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಈ ಕ್ಷೇತ್ರವನ್ನು ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳವನ್ನಾಗಿ ಅಭಿವೃದ್ಧಿಪಡಿಸುವ ಕೆಲಸ ಪ್ರಗತಿಯಲ್ಲಿದೆ. ಐದು ವರ್ಷಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಹೊಸ ರೂಪ ದೊರಕಲಿದೆ’ ಎಂದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಭಿವೃದ್ಧಿ ಪ್ರಾಧಿಕಾರ ರಚಿಸಿ, ದೊಡ್ಡ ಮೊತ್ತದ ಅನುದಾನ ನೀಡಿದ್ದರು. ಈಗ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುತ್ತಿದೆ. ಕೆಲವೇ ದಿನಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಭೇಟಿನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ‘ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತರಿಗಾಗಿ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ದಿಸೆಯಲ್ಲಿ ಸರ್ಕಾರ ಸಂಪೂರ್ಣ ನೆರವು ನೀಡಲಿದೆ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT